ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪರಾಧ ಪ್ರಕ್ರಿಯೆ (ಗುರುತಿಸುವಿಕೆ) ಮಸೂದೆಗೆ ರಾಷ್ಟ್ರಪತಿ ಅಂಕಿತ

Last Updated 19 ಏಪ್ರಿಲ್ 2022, 11:27 IST
ಅಕ್ಷರ ಗಾತ್ರ

ನವದೆಹಲಿ: ಅಪರಾಧ ಕೃತ್ಯಗಳಲ್ಲಿ ಆರೋಪಿಗಳ ದೈಹಿಕ, ಜೈವಿಕ ಮಾದರಿ ಸಂಗ್ರಹಿಸಲು ಪೊಲೀಸರಿಗೆ ಅಧಿಕಾರವನ್ನು ನೀಡುವ ಅಪರಾಧ ಪ್ರಕ್ರಿಯೆ (ಗುರುತಿಸುವಿಕೆ) ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ.

‘ಕೈದಿಗಳ ಗುರುತಿಸುವಿಕೆ ಕಾಯ್ದೆ 1920’ರ ಬದಲಿಗೆ ಇದು ಜಾರಿಗೆ ಬರಲಿದೆ. ಈ ಮಸೂದೆಗೆ ಸಂಸತ್ತಿನ ಉಭಯ ಸದನಗಳು ಇದೇ ತಿಂಗಳ ಆರಂಭದಲ್ಲಿ ಅನುಮೋದನೆ ನೀಡಿದ್ದವು.

ಲೆಕ್ಕಪರಿಶೋಧಕರು, ಲೆಕ್ಕಾಧಿಕಾರಿಗಳು ಮತ್ತು ಕಂಪನಿ ಕಾರ್ಯದರ್ಶಿಗಳ ನಿರ್ವಹಣೆಗೆ ಸಂಬಂಧಿಸಿ ಕಾಯ್ದೆಯ ತಿದ್ದುಪಡಿ ಮಸೂದೆಗೂ ರಾಷ್ಟ್ರಪತಿ ರಾಮನಾಥ ಕೋವಿಂದ್ ಅನುಮೋದನೆ ನೀಡಿದ್ದಾರೆ.

ಈ ವೃತ್ತಿಗಳಿಗೆ ಸಂಬಂಧಿತ ಕೇಂದ್ರೀಯ ಸಂಸ್ಥೆಗಳು ಇನ್ನಷ್ಟು ಪಾರದರ್ಶಕವಾಗಿ ಕೆಲಸ ಮಾಡಲು ಮಸೂದೆ ಅವಕಾಶ ಕಲ್ಪಿಸಲಿದೆ ಎನ್ನಲಾಗಿದೆ. ಸಂಸತ್ತು ಈ ಮಸೂದೆಯನ್ನು ಏಪ್ರಿಲ್ 5ರಂದು ಅನುಮೋದಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT