ಶುಕ್ರವಾರ, ಸೆಪ್ಟೆಂಬರ್ 24, 2021
23 °C

ವಾಜಪೇಯಿ ಪುಣ್ಯಸ್ಮರಣೆ: ‍ಪ್ರಧಾನಿ ಮೋದಿ, ರಾಷ್ಟ್ರಪತಿಯಿಂದ ಗೌರವ ನಮನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಮೂರನೇ ವರ್ಷದ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿನ ‘ಸದೈವ್‌ ಅಟಲ್‌’ ಸ್ಮಾರಕಕ್ಕೆ ಭೇಟಿ ನೀಡಿ, ಗೌರವ ನಮನ ಸಲ್ಲಿಸಿದರು.

ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಅಮಿತ್‌ ಶಾ, ರಾಜನಾಥ್‌ ಸಿಂಗ್‌ ಸೇರಿದಂತೆ ಕೇಂದ್ರದ ಹಲವು ಸಚಿವರು ಸ್ಮಾರಕ್ಕೆ ಭೇಟಿ ನೀಡಿ, ನಮನ ಸಲ್ಲಿಸಿದರು.

ಈ ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ,‘ ವಾಜ‍ಪೇಯಿ ಅವರ ಆತ್ಮೀಯ ವ್ಯಕ್ತಿತ್ವ, ಪ್ರೀತಿಯ ಸ್ವಭಾವ, ಬುದ್ಧಿವಂತಿಕೆ, ಹಾಸ್ಯ ಸ್ವಭಾವವನ್ನು ಸದಾ ನೆನಪಿಸಿಕೊಳ್ಳುತ್ತೇವೆ. ದೇಶಕ್ಕಾಗಿ ಅವರು ನೀಡಿದ ಕೊಡುಗೆಯನ್ನು ಸದಾ ಸ್ಮರಿಸುತ್ತೇವೆ. ನಾಗರಿಕರ ಹೃದಯದಲ್ಲಿ ಅಟಲ್‌ ಜೀ ಇದ್ದಾರೆ’ ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು