ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಲಸಿಕೆ ಹಾಕಿಸಿಕೊಂಡ ರಾಷ್ಟ್ರಪತಿ ರಾಮನಾಥ್ ಕೋವಿಂದ್

Last Updated 3 ಮಾರ್ಚ್ 2021, 8:29 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬುಧವಾರದಂದು ಕೋವಿಡ್-19 ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ.

ರಾಷ್ಟ್ರ ರಾಜಧಾನಿದೆಹಲಿಯ ಆರ್ಮಿ (ರಿಸರ್ಚ್ ಆ್ಯಂಡ್ ರೆಫರಲ್) ಆಸ್ಪತ್ರೆಯಲ್ಲಿ ರಾಮನಾಥ್ ಕೋವಿಂದ್ ಅವರು ಕೋವಿಡ್ ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡರು.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್, ವಿಶ್ವದ ಅತಿ ದೊಡ್ಡ ಕೋವಿಡ್ ಲಸಿಕಾ ವಿತರಣೆ ಕಾರ್ಯಕ್ರಮದ ಬಗ್ಗೆ ಅತೀವ ಹೆಮ್ಮೆಯಿದ್ದು, ಎರಡು ಲಸಿಕೆಗಳನ್ನು ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದರು.

ವಿಶ್ವದ ಅತಿ ದೊಡ್ಡ ಕೋವಿಡ್ ಲಸಿಕೆ ವಿತರಣೆಯ ಎರಡನೇ ಹಂತದ ಅಭಿಯಾನಕ್ಕೆ ಮಾರ್ಚ್ 1, ಸೋಮವಾರದಂದು ಚಾಲನೆ ನೀಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಕೋವಿಡ್-19 ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆರೋಗ್ಯ ಸಚಿವ ಹರ್ಷ ವರ್ಧನ್ ಸೇರಿದಂತೆ ಅನೇಕ ಗಣ್ಯರು ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.

ಎರಡನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟವರು ಹಾಗೂ ಇತರ ಗಂಭೀರ ಕಾಯಿಲೆಗಳಿಂದ ಬಳಲುವ, 45 ವರ್ಷಕ್ಕೂ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT