ಮಂಗಳವಾರ, ಮೇ 18, 2021
25 °C

ಶಸ್ತ್ರಚಿಕಿತ್ಸೆ ಬಳಿಕ ರಾಷ್ಟ್ರಪತಿ ಭವನಕ್ಕೆ ಮರಳಿದ ರಾಮನಾಥ ಕೋವಿಂದ್

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಏಮ್ಸ್‌) ಮಾರ್ಚ್‌ 30ರಂದು  ಹೃದಯದ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸೋಮವಾರ ರಾಷ್ಟ್ರಪತಿ ಭವನಕ್ಕೆ ಹಿಂತಿರುಗಿದರು.

‘ನನ್ನ ಶಸ್ತ್ರಚಿಕಿತ್ಸೆಯ ನಂತರ ನಾನು ರಾಷ್ಟ್ರಪತಿ ಭವನಕ್ಕೆ ಮರಳಿದ್ದೇನೆ. ನಿಮ್ಮೆಲ್ಲರ ಶುಭಾಶಯಗಳು ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು. ಏಮ್ಸ್ ಮತ್ತು ಸೇನೆಯ ಆರ್‌ಆರ್‌ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿ ನೀಡಿದ ಅಸಾಧಾರಣ ಆರೈಕೆಗೆ ಧನ್ಯವಾದಗಳು. ಎಲ್ಲರಿಗೂ ನಾನು ಕೃತಜ್ಞನಾಗಿದ್ದೇನೆ’ ಎಂದು ಕೋವಿಂದ್ ಅವರು ಟ್ವೀಟ್ ಮಾಡಿದ್ದಾರೆ.

ಓದಿ: 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು