ಗುರುವಾರ , ಮೇ 19, 2022
25 °C
ಜಮ್ಮು–ಕಾಶ್ಮೀರದಲ್ಲಿ ವಿಧಾನಸಭೆ ಅಸ್ತಿತ್ವದಲ್ಲಿ ಇಲ್ಲದಿರುವುದೇ ಕಾರಣ

ರಾಷ್ಟ್ರಪತಿ ಚುನಾವಣೆ: ಸಂಸದರ ಮತಮೌಲ್ಯ 708ರಿಂದ 700ಕ್ಕೆ ಇಳಿಕೆ ಸಾಧ್ಯತೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರಪತಿ ಆಯ್ಕೆಗಾಗಿ ಬರುವ ಜುಲೈನಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಪ್ರತಿ ಲೋಕಸಭಾ ಸದಸ್ಯರ ಮತದ ಮೌಲ್ಯ 708 ರಿಂದ 700ಕ್ಕೆ ಇಳಿಕೆಯಾಗುವ ಸಾಧ್ಯತೆ ಇದೆ.

ಕೇಂದ್ರಾಡಳಿತ ಪ್ರದೇಶ ಜಮ್ಮು–ಕಾಶ್ಮೀರದಲ್ಲಿ ವಿಧಾನಸಭೆ ಅಸ್ತಿತ್ವದಲ್ಲಿ ಇಲ್ಲದಿರುವುದು ಇದಕ್ಕೆ ಕಾರಣ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆದರೆ, ಜಮ್ಮು–ಕಾಶ್ಮೀರದಿಂದ ಆಯ್ಕೆಯಾಗಿರುವ ಸಂಸದರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಹೀಗಾಗಿ ಈ ಕೇಂದ್ರಾಡಳಿತ ಪ್ರದೇಶವು ರಾಷ್ಟ್ರಪತಿ ಚುನಾವಣೆ ವೇಳೆ ಪ್ರಾತಿನಿಧ್ಯದಿಂದ ವಂಚಿತವಾಗದು ಎಂದು ಮೂಲಗಳು ಹೇಳಿವೆ.

ಕೇಂದ್ರಾಡಳಿತ ಪ್ರದೇಶಗಳಾದ ದೆಹಲಿ, ಪುದುಚೇರಿ, ಜಮ್ಮು–ಕಾಶ್ಮೀರ ಹಾಗೂ ಎಲ್ಲ ರಾಜ್ಯಗಳಲ್ಲಿನ ಶಾಸಕರ ಸಂಖ್ಯೆಯ ಆಧಾರದಲ್ಲಿ ಸಂಸದರ ಮತದ ಮೌಲ್ಯ ನಿರ್ಧಾರವಾಗುತ್ತದೆ.

ಲಡಾಖ್‌ ಮತ್ತು ಜಮ್ಮು–ಕಾಶ್ಮೀರ ಎಂದು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜನೆಗೂ ಮೊದಲು ಜಮ್ಮು–ಕಾಶ್ಮೀರ ರಾಜ್ಯದಲ್ಲಿ 83 ವಿಧಾನಸಭಾ ಕ್ಷೇತ್ರಗಳಿದ್ದವು. ಈಗ, ಲಡಾಖ್‌ನಲ್ಲಿ ಕೇಂದ್ರದ ಆಡಳಿತವಿದೆ.

ಕ್ಷೇತ್ರ ಪುನರ್‌ವಿಂಗಡಣೆ ಕಾರ್ಯ ಪೂರ್ಣಗೊಂಡ ನಂತರ ಜಮ್ಮು–ಕಾಶ್ಮೀರ ವಿಧಾನಸಭೆಗೆ ಚುನಾವಣೆ ನಡೆಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಕ್ಷೇತ್ರ ಪುನರ್‌ವಿಂಗಡಣೆ ಆಯೋಗವು ತನ್ನ ಅಂತಿಮ ವರದಿಗೆ ಗುರುವಾರ ಸಹಿ ಹಾಕಿದ್ದು, ಈ ಬಗ್ಗೆ ಅಧಿಸೂಚನೆ ಹೊರಬೀಳುವುದು ಬಾಕಿ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು