ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಿಗೆ ಆರು ದಿನಗಳ ಪ್ರವಾಸದ ಭಾಗವಾಗಿ ಇಂದು (ಗುರುವಾರ) ಕೊಚ್ಚಿಗೆ ಆಗಮಿಸಲಿದ್ದಾರೆ.
ದೇಶದ ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಕೇರಳ ಮತ್ತು ಲಕ್ಷದ್ವೀಪಕ್ಕೆ ಇದು ಅವರ ಮೊದಲ ಭೇಟಿಯಾಗಿದೆ. ಇಂದು ಮಧ್ಯಾಹ್ನ ಕೊಚ್ಚಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅವರು ಆಗಮಿಸುವರು.
ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ನಿರ್ಮಾಣ ಮಾಡಿರುವ ಐಎನ್‌ಎಸ್ ವಿಕ್ರಾಂತ್‌ಗೆ ಭೇಟಿ ನೀಡಲಿದ್ದಾರೆ. ನಂತರ ನೌಕೆಯ ಅಧಿಕಾರಿಗಳು ಮತ್ತು ನಾವಿಕರೊಂದಿಗೆ ಸಂವಾದ ನಡೆಸಲಿದ್ದಾರೆ.
ಶುಕ್ರವಾರ ಕೊಲ್ಲಂನಲ್ಲಿರುವ ಮಾತಾ ಅಮೃತಾನಂದಮಯಿ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ತಿರುವನಂತಪುರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಲಯಾಳಂ ಭಾಷೆಗೆ ಅನುವಾದಿಸಲಾದ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಪುಸ್ತಕಗಳ ಬಿಡುಗಡೆ ಮಾಡಲಿದ್ದಾರೆ.
ಶನಿವಾರ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಸ್ಮಾರಕ ಮತ್ತು ತಿರುವಳ್ಳೂರ್ ಪ್ರತಿಮೆಗೆ ಭೇಟಿ ನೀಡಲಿದ್ದಾರೆ. ನಂತರ ಲಕ್ಷದ್ವೀಪದ ಕವರಟ್ಟಿಯಲ್ಲಿ ಸ್ವ-ಸಹಾಯ ಗುಂಪುಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಮಾರ್ಚ್ 21ರಂದು ಕೊಚ್ಚಿ ಮೂಲಕ ದೆಹಲಿಗೆ ಮರಳಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.