ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಸಿಟಿವಿ ಕ್ಯಾಮೆರಾ ಅಳವಡಿಸಿ: ಡಿಜಿಸಿಎಗೆ ಮಹಿಳಾ ಆಯೋಗ ಸೂಚನೆ

Last Updated 15 ಮಾರ್ಚ್ 2023, 12:28 IST
ಅಕ್ಷರ ಗಾತ್ರ

ನವದೆಹಲಿ: ಮದ್ಯದ ಅಮಲಿನಲ್ಲಿರುವ ವ್ಯಕ್ತಿಗಳು ವಿಮಾನ ಹತ್ತದಂತೆ ತಡೆಯುವುದು, ಮದ್ಯ ಸೇವನೆ ಮಿತಿಗೊಳಿಸುವುದು, ಸಿಸಿಟಿವಿ ಕ್ಯಾಮೆರಾ ಅಳವಡಿಸುವುದು ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳುವಂತೆ ದೆಹಲಿ ಮಹಿಳಾ ಆಯೋಗವು (ಡಿಸಿಡಬ್ಲ್ಯು) ನಾಗರಿಕ ವಿಮಾನ ಯಾನ ನಿರ್ದೇಶನಾಲಯ (ಡಿಜಿಸಿಎ)ಕ್ಕೆ ಹೇಳಿದೆ.

ವಿಮಾನಗಳಲ್ಲಿ ಪ್ರಯಾಣಿಕರು ಅಶಿಸ್ತಿನಿಂದ ವರ್ತಿಸುತ್ತಿರುವ ಘಟನೆಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಡಿಸಿಡಬ್ಲ್ಯು ಹಲವು ಮಾರ್ಗಸೂಚಿಗಳನ್ನು ನೀಡಿದೆ.

ಈ ಬಗ್ಗೆ ಡಿಜಿಸಿಎಗೆ ಬರೆದ ಪತ್ರದಲ್ಲಿ, ಲೈಂಗಿಕ ಕಿರುಕುಳದ ಬಗ್ಗೆ ವಿಮಾನ ಸಿಬ್ಬಂದಿಯನ್ನು ಸಂವೇದನಾಶೀಲಗೊಳಿಸಬೇಕು. ಇತ್ತೀಚಿನ ದಿನಗಳಲ್ಲಿ ವಿಮಾನಗಳಲ್ಲಿ ಅಶಿಸ್ತಿನ ಘಟನೆಗಳು ಹೆಚ್ಚುತ್ತಿರುವುದು ಪ್ರಯಾಣಿಕರಿಗೆ ಅತ್ಯಂತ ಅಹಿತಕರ ಮತ್ತು ಆಘಾತಕಾರಿ ಎಂದು ಆಯೋಗ ಹೇಳಿದೆ.

‘ಪ್ರಯಾಣಿಕರಿಂದ ಮಹಿಳೆಯರಿಗೆ ಆಗಿರುವ ಕಿರುಕುಳ ಬಗ್ಗೆ ಮಾಧ್ಯಮಗಳು ವರದಿ ಮಾಡಿದೆ. ನ್ಯೂಯಾರ್ಕ್‌ನಿಂದ ನವದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜಿಸಿದ್ದಾನೆ. ಮತ್ತೊಂದು ಪ್ರಕರಣದಲ್ಲಿ ಪ್ಯಾರಿಸ್‌ನಿಂದ ನವದಹೆಲಿಗೆ ಸಂಚರಿಸುತ್ತಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ವ್ಯಕ್ತಿಯೊಬ್ಬ ಮಹಿಳೆ ಸೀಟಿನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ಇಬ್ಬರೂ ಪುರುಷರು ಅತಿಯಾದ ಮದ್ಯ ಸೇವಿಸಿದ ಸ್ಥಿತಿಯಲ್ಲಿದ್ದರು ಎಂದು ವರದಿಯಾಗಿದೆ’ ಎಂದು ಸಮಿತಿ ಹೇಳಿದೆ. ಈ ಘಟನೆಗಳ ಬಗ್ಗೆ ಸ್ವಯಂಪ್ರೇರಿತ ಕ್ರಮ ತೆಗೆದುಕೊಳ್ಳಲಾಗಿದೆ. ಅಂತಹ ಪ್ರಕರಣಗಳನ್ನು ನಿಭಾಯಿಸಲು ವಿಮಾನಯಾನ ಸಂಸ್ಥೆಗಳಿಗೆ ಹೊರಡಿಸಿದ ಮಾರ್ಗಸೂಚಿಗಳೊಂದಿಗೆ ಅವರು ತೆಗೆದುಕೊಂಡ ಕ್ರಮಗಳ ವಿವರಗಳನ್ನು ಕೋರಿ ಡಿಜಿಸಿಎಗೆ ನೋಟಿಸ್ ನೀಡಿದೆ ಎಂದು ಹೇಳಿದೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಎಲ್ಲಾ ವಿಮಾನಯಾನ ಸಂಸ್ಥೆಗಳು ಡಿಜಿಸಿಎ 2023ರ ಜ.1 ರಂದು ಹೊರಡಿಸಿದ ಸಲಹೆಯ ಪ್ರತಿಯೊಂದಿಗೆ ಕೆಲವು ಮಾರ್ಗಸೂಚಿಗಳ ಪ್ರತಿಯನ್ನು ಸಮಿತಿಗೆ ನೀಡಿವೆ.

ಮಾರ್ಗಸೂಚಿಗಳು ಮತ್ತು ಸಲಹೆಗಳನ್ನು ಪರಿಶೀಲಿಸಿದಾಗ, ವಿಮಾನ ನಿಲ್ದಾಣ ಅಥವಾ ವಿಮಾನಗಳಲ್ಲಿ ಮಹಿಳಾ ಪ್ರಯಾಣಿಕರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಗಳನ್ನು ಸರಿಯಾಗಿ ನಿರ್ವಹಿಸಲು, ವರದಿ ಮಾಡಲು ಮತ್ತು ನಿವಾರಿಸಲು ವಿಮಾನಯಾನ ಸಂಸ್ಥೆಗಳಿಗೆ ಇವು ನಿರ್ದಿಷ್ಟ ಸೂಚನೆಗಳನ್ನು ನೀಡುವುದಿಲ್ಲ ಎಂಬುದನ್ನು ಆಯೋಗ ಗಮನಿಸಿದೆ.

ವಿಮಾನಗಳಲ್ಲಿ ಮತ್ತು ವಿಮಾನ ನಿಲ್ದಾಣಗಳಲ್ಲಿ ಲೈಂಗಿಕ ಕಿರುಕುಳ ಹಾಗೂ ಅಶಿಸ್ತಿನ ನಡವಳಿಕೆಯ ಪ್ರಕರಣಗಳನ್ನು ಕಟ್ಟುನಿಟ್ಟಾಗಿ ನಿಭಾಯಿಸಲು ಚಾಲ್ತಿಯಲ್ಲಿರುವ ಮಾರ್ಗಸೂಚಿಗಳಿಗೆ ಮಾಡಬೇಕಾದ ತಿದ್ದುಪಡಿಗಳ ಬಗ್ಗೆ ಆಯೋಗವು ವಿವರವಾದ ಶಿಫಾರಸು ಸಿದ್ಧಪಡಿಸಿದೆ.

ಮದ್ಯದ ಅಮಲಿನಲ್ಲಿರುವ ವ್ಯಕ್ತಿಗಳು ವಿಮಾನ ಹೇರದಂತೆ ತಡೆಯವುದು, ಅಂತಹ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಮತ್ತು ಮದ್ಯ ಸೇವನೆ ಮಿತಿಗೊಳಿಸುವುದು ಶಿಫಾರಸುಗಳಲ್ಲಿ ಸೇರಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT