ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2024 ಚುನಾವಣೆ: ಮುಸ್ಲಿಮರ ದಾರಿ ತಪ್ಪಿಸದಂತೆ ನೋಡಿಕೊಳ್ಳಿ– ಮಾಯಾವತಿ

Last Updated 27 ಜೂನ್ 2022, 11:32 IST
ಅಕ್ಷರ ಗಾತ್ರ

ಲಖನೌ:ಉತ್ತರ ಪ್ರದೇಶದ ಅಜಂಗಡ ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಕಾರ್ಯವೈಖರಿ ಬಗ್ಗೆ ಶ್ಲಾಘಿಸಿದ ಬಿಎಸ್‌ಪಿ ಅಧಿನಾಯಕಿ ಮಾಯಾವತಿ, 2024ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮುಸ್ಲಿಮರನ್ನು ದಿಕ್ಕು ತಪ್ಪಿಸದಂತೆ ಪಕ್ಷದ ಕಾರ್ಯಕರ್ತರು ಎಚ್ಚರ ವಹಿಸಬೇಕು ಎಂದು ಸೂಚಿಸಿದರು.

ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿದ ಅವರು, ‘ಅಜಂಗಡ ಲೋಕಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು, ಅಭ್ಯರ್ಥಿ ಶಾ ಅಲಂ ಅಲಿಯಾಸ್ ಗುಡ್ಡು ಜಮಾಲಿ ಅವರು ಅತ್ಯುತ್ತಮ ಹೋರಾಟ ಮಾಡಿದ್ದಾರೆ. ಈ ಹೋರಾಟವನ್ನು 2024ರ ಲೋಕಸಭೆ ಚುನಾವಣೆವರೆಗೆ ಮುಂದುವರಿಸಬೇಕು. ಅಲ್ಲದೆ, ಇಡೀ ಉತ್ತರ ಪ್ರದೇಶದಾದ್ಯಂತ ಮತಗಳನ್ನು ಕ್ರೋಡೀಕರಿಸಲು ಬಿಎಸ್‌ಪಿಯ ಹೋರಾಟ ನಿರಂತರವಾಗಿರಲಿದೆ. ಇದಕ್ಕಾಗಿ ಚುನಾವಣೆ ಸಂದರ್ಭದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ತಪ್ಪು ದಾರಿಗೆ ಎಳೆಯದಂತೆ ಎಚ್ಚರವಹಿಸಬೇಕಿರುವುದು ಮುಖ್ಯವಾಗಿದೆ’ ಎಂದು ಹೇಳಿದರು.

ಈ ಉಪಚುನಾವಣೆ ಫಲಿತಾಂಶವು ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಲು ಬಿಎಸ್‌ಪಿ ಮಾತ್ರವೇ ಶಕ್ತವಾಗಿದೆ ಎಂಬುದನ್ನು ನಿರೂಪಿಸಿದೆ ಎಂದು ಪ್ರತಿಪಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT