ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾಯ್ದೆ ವಿರುದ್ಧ ಧ್ವನಿ ಎತ್ತದಂತೆ ತಡೆಯುವುದು ವಾಕ್‌ ಸ್ವಾತಂತ್ರ್ಯದ ಉಲ್ಲಂಘನೆ’

ದೆಹಲಿ ಹೈಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಸೋನಿಯಾ–ರಾಹುಲ್‌ ಗಾಂಧಿ
Last Updated 30 ಆಗಸ್ಟ್ 2022, 15:40 IST
ಅಕ್ಷರ ಗಾತ್ರ

ನವದೆಹಲಿ: ‘ಸಂಸತ್ತು ಅಂಗೀಕರಿಸುವ ಯಾವುದೇ ಕಾನೂನು ಅಥವಾ ಮಸೂದೆ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸದಂತೆ ನಾಗರಿಕರನ್ನು ನಿರ್ಬಂಧಿಸುವುದು ವಾಕ್‌ ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವದ ತತ್ವಗಳ ಉಲ್ಲಂಘನೆಯಾಗುತ್ತದೆ’ ಎಂದು ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಅವರು ದೆಹಲಿ ಹೈಕೋರ್ಟ್‌ಗೆ ಮಂಗಳವಾರ ಸಲ್ಲಿಸಿರುವ ಪ್ರತ್ಯೇಕ ಅಫಿಡವಿಟ್‌ಗಳಲ್ಲಿ ತಿಳಿಸಿದ್ದಾರೆ.

ದ್ವೇಷ ಭಾಷಣದ ಮೂಲಕ2020ರ ಫೆಬ್ರುವರಿಯಲ್ಲಿ ನಡೆದಿದ್ದ ಗಲಭೆಗೆ ಪ್ರಚೋದನೆ ನೀಡಿದ ಆರೋಪದಡಿ ತಮ್ಮ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದನ್ನು ಅವರು ಪ್ರಶ್ನಿಸಿದ್ದಾರೆ.

ನ್ಯಾಯಮೂರ್ತಿಗಳಾದ ಸಿದ್ದಾರ್ಥ್‌ ಮೃದುಲ್‌ ಮತ್ತು ಅಮಿತ್‌ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠವು ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್‌ 27ಕ್ಕೆ ನಿಗದಿಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT