ಶುಕ್ರವಾರ, ಡಿಸೆಂಬರ್ 9, 2022
21 °C

ಕಾಂಗ್ರೆಸ್‌ ಸರ್ಕಾರ ಶಂಕುಸ್ಥಾಪನೆ ಮಾಡಿ, ಕಾಮಗಾರಿ ಮರೆಯುತ್ತಿತ್ತು: ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

ಬಿಸ್ಲಾಪುರ: ಕಾಂಗ್ರೆಸ್‌ ಸರ್ಕಾರ ಸಾಕಷ್ಟು ಯೋಜನೆಗಳ ಶಂಕು ಸ್ಥಾಪನೆ ಮಾಡಿ, ಚುನಾವಣೆ ಬಳಿಕ ಯೋಜನೆ ಪೂರ್ಣಗೊಳಿಸಲು ಮರೆತುಬಿಡುತ್ತಿತ್ತು. ಆದರೆ ತಮ್ಮ ಸರ್ಕಾರ ಶಂಕುಸ್ಥಾಪನೆಯ ಜೊತೆಗೆ ಯೋಜನೆಗಳ ಉದ್ಘಾಟನೆಯನ್ನೂ ನೆರವೇರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇಲ್ಲಿನ ಲಹ್ನು ಮೈದಾನದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನರು ರಾಜ್ಯ ಹಾಗೂ ಕೇಂದ್ರ ಎರಡರಲ್ಲಿಯೂ ಬಿಜೆಪಿಯನ್ನು ಆಯ್ಕೆ ಮಾಡಿರುವುದರಿಂದ ಈ ಅಭಿವೃದ್ಧಿ ಸಾಧ್ಯವಾಗಿದೆ ಎಂದರು.

ಎಐಐಎಂಎಸ್‌(ಏಮ್ಸ್‌) ಮತ್ತು ಹೈಡ್ರೋ ಎಂಜಿನಿಯರಿಂಗ್‌ ಕಾಲೇಜಿಗೆ ಪ್ರಧಾನಿ ಚಾಲನೆ ನೀಡಿದರು. ದೇಶವನ್ನು ರಕ್ಷಣೆ ಮಾಡುವಲ್ಲಿ ಹಿಮಾಚಲ ಪ್ರದೇಶ ಮಹತ್ವದ ಪಾತ್ರ ವಹಿಸಿದೆ. ಈಗ ಏಮ್ಸ್‌ ಬಿಸ್ಲಾಪುರದೊಂದಿಗೆ ಜೀವ ರಕ್ಷಣೆಯಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ ಎಂದು ಪ್ರಧಾನಿ ಹೇಳಿದರು.

ಮುಂದಿನ ಎರಡು ತಿಂಗಳೊಳಗೆ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಅದರ ಬೆನ್ನಲ್ಲೇ ಪ್ರಧಾನಿ ಬಹಿರಂಗ ಸಭೆ ಆಯೋಜಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು