ಸೋಮವಾರ, ಸೆಪ್ಟೆಂಬರ್ 26, 2022
22 °C

ಪ್ರತಿಭಾನ್ವೇಷಣೆಗೆ ಮಾತೃಭಾಷೆ ಶಿಕ್ಷಣ ಪರಿಣಾಮಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ವಿಜ್ಞಾನ, ಸಾಹಿತ್ಯ ಮತ್ತು ಸಮಾಜ ವಿಜ್ಞಾನ ಕ್ಷೇತ್ರಗಳಲ್ಲಿ ಪ್ರತಿಭಾನ್ವೇಷಣೆಗೆ ಮಾತೃಭಾಷೆ ಶಿಕ್ಷಣ ಹೆಚ್ಚು ಪರಿಣಾಮಕಾರಿ’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

ವಿಜ್ಞಾನ ಭವನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕದ ವಿ.ಪೊನಶಂಕರಿ ಮತ್ತು ಟಿ.ಪಿ.ಉಮೇಶ್‌ ಸೇರಿದಂತೆ ಒಟ್ಟು 46 ಶಿಕ್ಷಕರಿಗೆ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

‘ವಿಜ್ಞಾನ, ಸಂಶೋಧನೆ ಹಾಗೂ ಆವಿಷ್ಕಾರವು ಜ್ಞಾನಾಧಾರಿತ ಆರ್ಥಿಕತೆಯ ಬುನಾದಿಗಳಾಗಿವೆ. ಈ ಕ್ಷೇತ್ರಗಳಲ್ಲಿ ಭಾರತದ ಸ್ಥಾನವನ್ನು ಇನ್ನಷ್ಟು ಉತ್ತಮಪಡಿಸಬೇಕು. ಇದಕ್ಕೆ ಶಾಲಾ ಹಂತದಲ್ಲೇ ಅಡಿಪಾಯ ಹಾಕಬೇಕು. ಶಿಕ್ಷಕರು ಮಕ್ಕಳಲ್ಲಿ ಪ್ರಶ್ನೆ ಕೇಳುವ ಹಾಗೂ ಅನುಮಾನ ವ್ಯಕ್ತಪಡಿಸುವ ಮನೋಭಾವ ಬೆಳೆಸಬೇಕು. ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸುವ ಹಾಗೂ ಅವರ ಅನುಮಾನಗಳನ್ನು ಪರಿಹರಿಸುವುದರಿಂದ ಶಿಕ್ಷಕರ ಜ್ಞಾನವೂ ಹೆಚ್ಚುತ್ತದೆ’ ಎಂದಿದ್ದಾರೆ.

‘ಆರಂಭದಲ್ಲಿ ನಮಗೆ ಬದುಕುವ ಕಲೆ ಕಲಿಸಿಕೊಟ್ಟವರು ಅಮ್ಮಂದಿರು. ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಹೊರಗೆಡವಲು ಮಾತೃಭಾಷೆ ಶಿಕ್ಷಣ ಸಹಕಾರಿ. ಹೀಗಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ (ಎನ್‌ಇಪಿ) ಶಾಲಾ ಹಾಗೂ ಉನ್ನತ ಶಿಕ್ಷಣದಲ್ಲಿ ಸ್ಥಳೀಯ ಭಾಷೆ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು