ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರಾಣಸಿ: ₹1,780 ಕೋಟಿ ವೆಚ್ಚದ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

Last Updated 24 ಮಾರ್ಚ್ 2023, 7:06 IST
ಅಕ್ಷರ ಗಾತ್ರ

ಲಖನೌ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರ ವಾರಾಣಸಿಯಲ್ಲಿ ಇಂದು (ಶುಕ್ರವಾರ) ₹1,780 ಕೋಟಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಇನ್ನಷ್ಟೇ ‘ಒನ್‌ ವರ್ಲ್ಡ್ ಟಿ.ಬಿ ಶೃಂಗಸಭೆ’ಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ.

ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಬಿಜೆಪಿ ನಾಯಕರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

ವಿಶ್ವ ಕ್ಷಯರೋಗ ದಿನ ಮತ್ತು ಟಿ.ಬಿ. ತಡೆ ಪಾಲುದಾರಿಕೆ ಉದ್ದೇಶದಿಂದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ‘ಒನ್ ವರ್ಲ್ಡ್ ಟಿ.ಬಿ ಶೃಂಗಸಭೆ’ಯನ್ನು ಆಯೋಜಿಸಿದೆ.

ಟಿ.ಬಿ ಮುಕ್ತ ಪಂಚಾಯತ್ ಉಪಕ್ರಮ, ಪ್ಯಾನ್-ಇಂಡಿಯಾ ರೋಲ್‌ಔಟ್‌ನ ಕಡಿಮೆ ಟಿ.ಬಿ ಪ್ರಿವೆಂಟಿವ್ ಟ್ರೀಟ್‌ಮೆಂಟ್‌ ಮತ್ತು ಕ್ಷಯರೋಗಕ್ಕೆ ಕುಟುಂಬ ಕೇಂದ್ರಿತ ಆರೈಕೆ ಮಾದರಿ ಸೇರಿದಂತೆ ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದು, ಭಾರತದ ವಾರ್ಷಿಕ ಟಿ.ಬಿ ವರದಿ 2023 ಅನ್ನು ಬಿಡುಗಡೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT