ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಯಣ, ಭೋಗಿ ಹಬ್ಬಕ್ಕೆ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

Last Updated 14 ಜನವರಿ 2023, 7:12 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಭೋಗಿ ಮತ್ತು ಉತ್ತರಾಯಣ ಹಬ್ಬದ ಪ್ರಯುಕ್ತ ದೇಶದ ಜನರಿಗೆ ಟ್ವೀಟ್‌ ಮೂಲಕ ಶುಭಾಶಯ ಕೋರಿದ್ದಾರೆ.

"ಈ ಸಂದರ್ಭದಲ್ಲಿ ಪ್ರತಿಯೊಬ್ಬರ ಸಂತೋಷ, ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ "ಎಂದಿದ್ದಾರೆ.

ಭಾರತದ ಅನೇಕ ರಾಜ್ಯಗಳಲ್ಲಿ ಪೊಂಗಲ್‌ನ ಮೊದಲ ದಿನ ಭೋಗಿಯ ಹಬ್ಬ ಎಂದು ಆಚರಿಸಲಾಗುವುದು. ಗುಜರಾತ್‌ನಲ್ಲಿ ಉತ್ತರಾಯಣ ದಿನ ಗಾಳಿಪಟ ಉತ್ಸವವು ಪ್ರಮುಖವಾಗಿದೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಮಕರ ಸಂಕ್ರಾಂತಿ, ಆಂಧ್ರಪ್ರದೇಶದಲ್ಲಿ ಪೆದ್ದ ಪಂಡುಗ, ತಮಿಳುನಾಡಿನಲ್ಲಿ ಪೊಂಗಲ್, ಕೇರಳದಲ್ಲಿ ಶಂಕರಾಂತಿ, ಅಸ್ಸಾಂನಲ್ಲಿ ಮಾಘ ಬಿಹು ಹಾಗೂ ಉತ್ತರ ಭಾರತದ ಅನೇಕ ಭಾಗಗಳಲ್ಲಿ ಮಾಘ ಮೇಳ ಎಂದು ಆಚರಿಸುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT