ನವದೆಹಲಿ: ಬಾಂಗ್ಲಾದೇಶದ ಸುವರ್ಣ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಢಾಕಾಗೆ ಇಂದು(ಶುಕ್ರವಾರ) ಭೇಟಿ ನೀಡಲಿದ್ದಾರೆ.

ಮಾರ್ಚ್ 17ರಿಂದ 27ರವರೆಗೆ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮಗಳು ನಡೆಯಲಿವೆ. 1971ರ ವಿಮೋಚನಾ ಯುದ್ಧದ ನಂತರ ಪಾಕಿಸ್ತಾನದಿಂದ ಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ದೊರೆತ ಸಂಭ್ರಮದ ಜೊತೆಗೆ ರಾಷ್ಟ್ರಪಿತ ಬಂಗಬಂಧು ಶೇಖ್ ಮುಜಿಬುರ್ ರಹಮಾನ್ ಅವರ ಜನ್ಮ ಶತಮಾನೋತ್ಸವವೂ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 26ರಂದು ಢಾಕಾದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಬಾಂಗ್ಲಾದೇಶ– ಭಾರತದ 50 ವರ್ಷಗಳ ರಾಜತಾಂತ್ರಿಕ ಸಂಬಂಧದ ದ್ಯೋತಕವಾಗಿ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ.

‘ಬಾಂಗ್ಲಾ ಭೇಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಢಾಕಾದ ಹೊರವಲಯದ ಮೂರು ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಇದೇ ವೇಳೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಂತರ ಉಭಯ ರಾಷ್ಟ್ರಗಳ ನಾಯಕರು ಮೂರು ಒಡಂಬಡಿಕೆಗಳಿಗೆ (ಎಂಒಯು) ಸಹಿ ಹಾಕಲಿದ್ದಾರೆ' ಎಂದು ವಿದೇಶಾಂಗ ಕಾರ್ಯದರ್ಶಿ ಬಾಂಗ್ಲಾದೇಶದ ವಿದೇಶಾಂಗ ಸಚಿವ ಎಕ್ ಅಬ್ದುಲ್ ಮೊಮೆನ್ ಹೇಳಿದ್ದಾರೆ.

ಕೋವಿಡ್ ಸಾಂಕ್ರಾಮಿಕ ಕಾಣಿಸಿಕೊಂಡ ನಂತರ ಪ್ರಧಾನಿ ಮೋದಿಯವರ ಮೊದಲ ವಿದೇಶಿ ಪ್ರಯಾಣ ಇದಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.