ನವದೆಹಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭ ಹಾರೈಸಿದ್ದಾರೆ.

ಈ ಕುರಿತು ಪ್ರಧಾನಿ ಮೋದಿ ತಮ್ಮ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ತಮ್ಮ ಭಾಷಣದಲ್ಲಿ ರಾಷ್ಟ್ರಕವಿ ಕುವೆಂಪು ಉಲ್ಲೇಖಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

'ದೇಶದ ಜನತೆಗೆ ತುಂಬಾ ವಿಶೇಷವಾದ ಸ್ವಾತಂತ್ರ್ಯ ದಿನದ ಹಾರ್ದಿಕ ಶುಭಾಶಯಗಳು. ಜೈ ಹಿಂದ್' ಎಂದು ಹೇಳಿದ್ದಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ದೆಹಲಿಯ ಕೆಂಪು ಕೋಟೆಯಲ್ಲಿ ಬೆಳಿಗ್ಗೆ ಪ್ರಧಾನಿ ಮೋದಿ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ಹುದ್ದೆ ವಹಿಸಿದ ಬಳಿಕ ಪ್ರಧಾನಿ ಮೋದಿ ಸತತ ಒಂಬತ್ತನೇ ಬಾರಿಗೆ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇದನ್ನೂ ಓದಿ:ಸ್ವಾತಂತ್ರ್ಯ ಉತ್ಸವ: ‘ಅಮೃತ’ ಸಂಭ್ರಮದಲ್ಲಿ ಭಾರತ

ಪ್ರಧಾನಿ ತಮ್ಮ ಭಾಷಣದಲ್ಲಿ ಮಹತ್ವದ ಯೋಜನೆಗಳನ್ನು ಘೋಷಿಸುವ ನಿರೀಕ್ಷೆ ಇದೆ. ಸ್ವಾತಂತ್ರ್ಯ ದಿನದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ಸೇರಿದಂತೆ ದೇಶದಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 'ಪ್ರತಿ ಮನೆಗೂ ತ್ರಿವರ್ಣ ಧ್ವಜ', 'ತಿರಂಗಾ ಯಾತ್ರೆ' ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಸರ್ಕಾರ ಹಮ್ಮಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.