ಶುಕ್ರವಾರ, ಸೆಪ್ಟೆಂಬರ್ 24, 2021
23 °C

ಉನ್ನತಮಟ್ಟದ ಸಭೆ ನಡೆಸಿದ ಮೋದಿ: ಕಾಬೂಲ್‌ನಿಂದ ಬಂದವರಿಂದ ‘ಭಾರತ್ ಮಾತಾಕಿ ಜೈ’ ಘೋಷ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಯುದ್ಧ ಪೀಡಿತ ಅಫ್ಗಾನಿಸ್ತಾನದ ಪರಿಸ್ಥಿತಿಯ ಅವಲೋಕನಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಜೆ ಭದ್ರತಾ ವಿಚಾರಕ್ಕೆ ಸಂಬಂಧಿಸಿದ ಕ್ಯಾಬಿನೆಟ್ ಸಮಿತಿಯ ಸಭೆ ನಡೆಯಿತು.

ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಭಾಗವಹಿಸಿದ್ದರು.

ಆಫ್ಗಾನ್ ಪರಿಸ್ಥಿತಿಗೆ ಸಂಬಂಧಿಸಿದಂತೆ ಪ್ರಧಾನಿ, ನಿರಂತರವಾಗಿ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು ನಿನ್ನೆ ತಡರಾತ್ರಿಯವರೆಗೂ ಪರಿಸ್ಥಿತಿಯ ಅವಲೋಕನ ಮಾಡುತ್ತಿದ್ದರು. ಮುಂದೆ ಬರಬಹುದಾದ ಪರಿಸ್ಥಿತಿ ಎದುರಿಸಲು ಸನ್ನದ್ಧತೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಎನ್‌ಟಿವಿ ವರದಿ ಮಾಡಿದೆ.

ಓದಿ: 

ಭಾರತವು ಕಾಬೂಲ್‌ನಲ್ಲಿರುವ ರಾಯಭಾರ ಕಚೇರಿಯಿಂದ ತನ್ನ ಎಲ್ಲಾ ಸಿಬ್ಬಂದಿಯನ್ನು ಸ್ಥಳಾಂತರಿಸಿದೆ. ಭದ್ರತಾ ಕರ್ತವ್ಯದಲ್ಲಿದ್ದ ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ ಸೇರಿದಂತೆ ರಾಯಭಾರ ಕಚೇರಿ ಸಿಬ್ಬಂದಿ ಎರಡು ವಾಯುಪಡೆಯ ವಿಮಾನಗಳಲ್ಲಿ ಭಾರತಕ್ಕೆ ಬಂದಿದ್ದಾರೆ.

ಈ ಮಧ್ಯೆ, ಆಫ್ಗಾನಿಸ್ತಾನದಿಂದ ವಿಮಾನದ ಮೂಲಕ ಗಾಜಿಯಾಬಾದ್‌ಗೆ ಬಂದಿಳಿದ ಪ್ರಯಾಣಿಕರು ‘ಭಾರತ್ ಮಾತಾ ಕಿ ಜೈ’ ಎಂದು ಪಠಿಸುತ್ತಿರುವ ವಿಡಿಯೊ ವೈರಲ್ ಆಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು