ಶನಿವಾರ, ಸೆಪ್ಟೆಂಬರ್ 18, 2021
22 °C

ಭಾರತಕ್ಕೆ ಭದ್ರತಾ ಮಂಡಳಿ ಅಧ್ಯಕ್ಷ ಸ್ಥಾನ: ಮೊದಲ ಸಭೆಗೆ ಪ್ರಧಾನಿ ಅಧ್ಯಕ್ಷತೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತದ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಮೊದಲ ಸಭೆ ಆಗಸ್ಟ್‌ 9ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೇ ಅಧ್ಯಕ್ಷತೆಯನ್ನು ವಹಿಸುವ ಸಂಭವವಿದೆ.

ದೇಶ 75ನೇ ಸ್ವಾತಂತ್ರ್ಯೋತ್ಸವ ಆಚರಿಸುವ ಸಂದರ್ಭದಲ್ಲಿಯೇ ಈ ಗೌರವ ಸಿಕ್ಕಿರುವುದು ಹೆಮ್ಮೆಯ ವಿಷಯ ಎಂದು  ವಿಶ್ವಸಂಸ್ಥೆಯಲ್ಲಿ ಭಾರತದ ಶಾಶ್ವತ ಪ್ರತಿನಿಧಿಯಾಗಿರುವ ಟಿ.ಎಸ್‌.ತಿರುಮೂರ್ತಿ ಅವರು ಪ್ರತಿಕ್ರಿಯಿಸಿದ್ದಾರೆ.

ವರ್ಚ್ಯುಯೆಲ್‌ ಸ್ವರೂಪದಲ್ಲಿ ಭಾರತ ಅಧ್ಯಕ್ಷತೆಯಲ್ಲಿ ನಡೆಯುವ ಮೊದಲ ಸಭೆ ಅಧ್ಯಕ್ಷತೆಯನ್ನು ಪ್ರಧಾನಿಯವರೇ ವಹಿಸಬಹುದು ಎಂದು ಈ ಹಿಂದೆ ವಿಶ್ವಸಂಸ್ಥೆಯ ಶಾಶ್ವತ ಪ್ರತಿನಿಧಿಯಾಗಿದ್ದ ಸಯ್ಯದ್‌ ಅಕ್ಬರುದ್ದೀನ್‌ ಟ್ವೀಟ್ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು