ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲತಾ ಮಂಗೇಶ್ಕರ್‌ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

Last Updated 6 ಫೆಬ್ರುವರಿ 2022, 14:19 IST
ಅಕ್ಷರ ಗಾತ್ರ

ಮುಂಬೈ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 'ಗಾನ ಕೋಗಿಲೆ' ಮಂಗೇಶ್ಕರ್‌ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ಭಾನುವಾರ ಸಂಜೆ 5 ಗಂಟೆಗೆ ಮುಂಬೈಗೆ ಬಂದಿಳಿದ ಅವರು, ನೇರವಾಗಿ ಶಿವಾಜಿ ಪಾರ್ಕ್‌ಗೆ ತೆರಳಿದರು. ಅಲ್ಲಿ ಲತಾ ಮಂಗೇಶ್ಕರ್‌ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ, ಸಚಿವ ಆದಿತ್ಯ ಠಾಕ್ರೆ, ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್‌ ಬರಮಾಡಿಕೊಂಡರು.

ಲತಾ ಅವರ ಅಂತಿಮ ವಿಧಿ ವಿಧಾನಗಳಲ್ಲಿ ಮಹಾರಾಷ್ಟ್ರ ಮೂಲದ ಎಲ್ಲ ಕೇಂದ್ರ ಮಂತ್ರಿಗಳೂ ಭಾಗವಹಿಸಿದ್ದಾರೆ.

ಭಾರತ ರತ್ನ ಪುರಸ್ಕೃತೆ, ಗಾಯಕಿ ಲತಾ ಮಂಗೇಶ್ಕರ್‌ (92) ಅವರು ಇಂದು ನಿಧನರಾದರು. ಕೋವಿಡ್‌–19 ದೃಢಪಟ್ಟ ಹಿನ್ನೆಲೆ ಚಿಕಿತ್ಸೆಗಾಗಿ ಅವರು ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ಜನವರಿ 8ರಂದು ದಾಖಲಾಗಿದ್ದರು. ಕೆಲವು ವಾರಗಳಿಂದ ಅವರು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದರು.

ಇತ್ತೀಚೆಗೆ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಾಣಿಸಿಕೊಂಡಿತ್ತಾದರೂ, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ, ಭಾನುವಾರ ಬೆಳಿಗ್ಗೆ ಅವರು ಅಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT