ಸಂಜೆ 5ಕ್ಕೆ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ

ನವದೆಹಲಿ: ಭಾರತ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ (ಸೋಮವಾರ) 5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ.
Prime Minister Shri @narendramodi will address the nation at 5 PM today, 7th June.
— PMO India (@PMOIndia) June 7, 2021
ಕಳೆದ ವರ್ಷದಿಂದ ಕೋವಿಡ್-19 ಸಾಂಕ್ರಾಮಿಕ ರೋಗ ಹರಡಿದ ಬಳಿಕ ಪ್ರಧಾನಿ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಅನೇಕ ಬಾರಿ ಮಾತನಾಡಿದ್ದಾರೆ. ಅಲ್ಲದೆ ಸಂದರ್ಭಕ್ಕೆ ತಕ್ಕಂತೆ ಸೂಕ್ತ ಸಲಹೆ ಸೂಚನೆಗಳನ್ನು ನೀಡುತ್ತಲೇ ಬಂದಿದ್ದಾರೆ.
ಇದನ್ನೂ ಓದಿ: ಅರೆ ಸೇನಾ ಪಡೆಗಳ ಸಂಚಾರ; ಕಾಶ್ಮೀರದಲ್ಲಿ 'ಆತಂಕ‘ದ ಕಾರ್ಮೋಡ
ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ವಿವರಣೆ ನೀಡಿದ್ದಾರೆ.
ಹಾಗಿದ್ದರೂ ಸಂಜೆ 5ಕ್ಕೆ ಯಾವ ವಿಷಯದ ಕುರಿತು ಪ್ರಧಾನಿ ಮೋದಿ ಪ್ರಸ್ತಾಪ ಮಾಡಲಿದ್ದಾರೆ ಎಂಬುದು ಕುತೂಹಲವೆನಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.