ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಇಂದು ಪ್ರಧಾನಿ ಮೋದಿ ಮನ್‌ ಕಿ ಬಾತ್‌ನಲ್ಲಿ ದೇಶವನ್ನು ಉದ್ದೇಶಿಸಿ ಮಾತು

Last Updated 25 ಏಪ್ರಿಲ್ 2021, 4:27 IST
ಅಕ್ಷರ ಗಾತ್ರ

ನವದೆಹಲಿ: ತಿಂಗಳ ರೇಡಿಯೊ ಕಾರ್ಯಕ್ರಮ 'ಮನ್‌ ಕಿ ಬಾತ್‌'ನ 76ನೇ ಕಂತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಭಾನುವಾರ ಬೆಳಿಗ್ಗೆ 11ಗಂಟೆ ಕಾರ್ಯಕ್ರಮ ಪ್ರಸಾರವಾಗಲಿದೆ.

ದೇಶದಲ್ಲಿ ಕೋವಿಡ್‌–19 ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದ್ದು, ನಿತ್ಯ 3 ಲಕ್ಷಕ್ಕೂ ಅಧಿಕ ಸೋಂಕು ಪ್ರಕರಣಗಳು ದಾಖಲಾಗುತ್ತಿವೆ. 2,500ಕ್ಕೂ ಹೆಚ್ಚು ಜನರು ಸೋಂಕಿನಿಂದ ಸಾವಿಗೀಡಾಗುತ್ತಿರುವುದು ವರದಿಯಾಗುತ್ತಿದೆ. ಹಲವು ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರ ಇಂದಿನ ಮಕ್‌ ಕಿ ಬಾತ್‌ ಮಹತ್ವ ಪಡೆದಿದೆ.

ಕಳೆದ ರೇಡಿಯೊ ಕಾರ್ಯಕ್ರಮದಲ್ಲಿ ಎಲ್ಲ ನಾಗರಿಕರಿಗೆ ಕೋವಿಡ್‌–19 ಲಸಿಕೆ ಹಾಕಿಸಿಕೊಳ್ಳುವಂತೆ ಕರೆ ನೀಡಿದರು. ಕೃಷಿ ಕ್ಷೇತ್ರದಲ್ಲಿ ಸಾಂಪ್ರದಾಯಿಕ ವ್ಯವಸಾಯದೊಂದಿಗೆ ಪರ್ಯಾಯ ಪದ್ಧತಿಗಳನ್ನು ಅಳವಡಿಸಿಕೊಳ್ಳುವಂತೆ ರೈತರಿಗೆ ಸಲಹೆ ನೀಡಿದರು. ಹಾಗೇ ಸರ್ಕಾರವು ಕೃಷಿ ಕ್ಷೇತ್ರದ ಆಧುನಿಕತೆಗೆ ಬದ್ಧವಾಗಿದೆ ಎಂದರು.

ಆಕಾಶವಾಣಿ (ಎಐಆರ್) ಮತ್ತು ದೂರದರ್ಶನದಲ್ಲಿ ಪ್ರಧಾನಿ ಮೋದಿ ಅವರ 'ಮನ್‌ ಕಿ ಬಾತ್‌' ಪ್ರಸಾರವಾಗಲಿದೆ. ಎಐಆರ್‌ ನ್ಯೂಸ್‌ ವೆಬ್‌ಸೈಟ್‌ನಲ್ಲೂ (www.newsonair.com) ಪ್ರಧಾನಿ ಮಾತು ಕೇಳಬಹುದಾಗಿದೆ. ಎಐಆರ್‌, ಡಿಡಿ ನ್ಯೂಸ್‌, ಪಿಎಂಒ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯುಟ್ಯೂಬ್‌ ಚಾನೆಲ್‌ಗಳಲ್ಲಿಯೂ ಕೇಳಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT