ಬುಧವಾರ, ಮೇ 18, 2022
27 °C
ಹೊಸ ಕೃಷಿ ಕಾಯ್ದೆಗಳ ಜಾರಿ ವಿರುದ್ಧ ಕಾಂಗ್ರೆಸ್‌ ಮುಖಂಡ ವಾಗ್ದಾಳಿ

ಸ್ನೇಹಿತರಿಗೆ ಅನುಕೂಲ ಕಲ್ಪಿಸುತ್ತಿರುವ ಪ್ರಧಾನಿ: ರಾಹುಲ್‌ ಗಾಂಧಿ ಟೀಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೈಪುರ: ‘ಹೊಸ ಕೃಷಿ ಕಾಯ್ದೆಗಳ ಮೂಲಕ ತಮ್ಮ ಸ್ನೇಹಿತರಿಗೆ ಮುಕ್ತ ಮಾರ್ಗ ಕಲ್ಪಿಸಲು ಪ್ರಧಾನಿ ನರೇಂದ್ರ ಮೋದಿ ಯತ್ನಿಸುತ್ತಿದ್ದಾರೆ’ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ರಾಜಸ್ಥಾನದ ಹನುಮಾನಗಢ ಜಿಲ್ಲೆಯ ಪಿಲಿಬಂಗಾ ನಗರದಲ್ಲಿ ರೈತರ ’ಮಹಾಪಂಚಾಯತ್‌’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಹೊಸ ಕೃಷಿ ಕಾಯ್ದೆಗಳು ಶೇಕಡ 40ರಷ್ಟು ಭಾರತೀಯರ ಮೇಲೆ ಪರಿಣಾಮ ಬೀರಲಿವೆ. ರೈತರು, ವ್ಯಾಪಾರಿಗಳು ಮತ್ತು ಕಾರ್ಮಿಕರು ಸಂಕಷ್ಟಕ್ಕೆ ಸಿಲುಕುತ್ತಾರೆ’ ಎಂದು ಹೇಳಿದ್ದಾರೆ.

‘ನೋಟು ರದ್ದು ಹಾಗೂ ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್‌ಟಿ) ಬಳಿಕ, ಕೇಂದ್ರ ಸರ್ಕಾರ ಈಗ ಕೃಷಿ ಕಾಯ್ದೆಗಳ ಮೂಲಕ ದೇಶದ ಜನತೆಯನ್ನು ಈಗ ಸಂಕಷ್ಟಕ್ಕೆ ಸಿಲುಕಿಸುತ್ತಿದೆ’ ಎಂದು ದೂರಿದರು.

‘ನೋಟುಗಳನ್ನು ರದ್ದುಗೊಳಿಸಿದಾಗ ಇದು ಕಪ್ಪು ಹಣ ನಿಯಂತ್ರಿಸಲು ಕೈಗೊಂಡ ನಿರ್ಧಾರವಲ್ಲ ಎಂದು ಹೇಳಿದ್ದೆ. ಆದರೆ, ಆ ಸಂದರ್ಭದಲ್ಲಿ ಜನರು ನನ್ನ ಮಾತನ್ನು ಅರ್ಥ ಮಾಡಿಕೊಳ್ಳಲಿಲ್ಲ. ಬಳಿಕ ಜಿಎಸ್‌ಟಿ ಅನುಷ್ಠಾನಗೊಳಿಸಲಾಯಿತು. ಈ ಮೂಲಕ ಸಣ್ಣ ಮತ್ತು ಮಧ್ಯಮ ವರ್ಗದ ವ್ಯಾಪಾರಿಗಳ ಮೇಲೆ ದಾಳಿ ಮಾಡಲಾಯಿತು. ಈ ರೀತಿಯ ವ್ಯವಸ್ಥೆಗಳ ಮೂಲಕ ತಮ್ಮ ಸ್ನೇಹಿತರಿಗೆ ಮುಕ್ತ ಮಾರ್ಗ ಮತ್ತು ವಾತಾವರಣ ಕಲ್ಪಿಸಲು ಪ್ರಧಾನಿ ನರೇಂದ್ರ ಮೋದಿ ಯತ್ನಿಸುತ್ತಿದ್ದಾರೆ’ ಎಂದು ಟೀಕಿಸಿದರು.

‘ರೈತರು, ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳ ಶಕ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅರ್ಥ ಮಾಡಿಕೊಂಡಿಲ್ಲ’ ಎಂದು ರಾಹುಲ್‌ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು