ಶನಿವಾರ, ಡಿಸೆಂಬರ್ 4, 2021
24 °C

ಇಂದು ಬೆಳಿಗ್ಗೆ 10ಕ್ಕೆ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 10 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕುರಿತು ಪ್ರಧಾನ ಮಂತ್ರಿಗಳ ಕಾರ್ಯಾಲಯ ಟ್ವಿಟರ್‌ನಲ್ಲಿ ಪ್ರಕಟಿಸಿದೆ.

'ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 10ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ' ಎಂದು ಟ್ವೀಟಿಸಲಾಗಿದೆ.

ಇದನ್ನೂ ಓದಿ– ದೇಶದ ಜನರಿಗೀಗ 'ಮೇಡ್‌ ಇನ್‌ ಇಂಡಿಯಾ' ಶಕ್ತಿಯ ಅನುಭವವಾಗಿದೆ: ಪ್ರಧಾನಿ ಮೋದಿ
 

ಭಾರತವು ಗುರುವಾರ 100 ಕೋಟಿ ಕೋವಿಡ್‌–19 ಲಸಿಕೆ ಡೋಸ್‌ಗಳ ವಿತರಣೆ ಘಟ್ಟವನ್ನು ದಾಟುವ ಮೂಲಕ ದಾಖಲೆ ನಿರ್ಮಿಸಿದ್ದು, ಅದರ ಬೆನ್ನಲ್ಲೇ ಪ್ರಧಾನಿ ಮೋದಿ ಅವರ ಭಾಷಣ ನಿಗದಿಯಾಗಿದೆ. ನಿನ್ನೆ ಪ್ರಧಾನಿ ರಾಮ ಮನೋಹರ್‌ ಲೋಹಿಯಾ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು. ಜಗತ್ತಿನ ಆರ್ಥಿಕತೆಯು ಮುಗ್ಗರಿಸುವಂತೆ ಮಾಡಿದ ಕೋವಿಡ್‌ ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ಆರೋಗ್ಯ ಕಾರ್ಯಕರ್ತರು ವಹಿಸಿದ ಪಾತ್ರ ನಿರ್ಣಾಯಕ ಎಂದು ಮೋದಿ ಕೊಂಡಾಡಿದರು.

ಹಬ್ಬಗಳ ಸಂದರ್ಭದಲ್ಲಿ ಜನರು ಇನ್ನಷ್ಟು ಮುನ್ನೆಚ್ಚರಿಕೆಯಿಂದ ನಡೆದುಕೊಳ್ಳುವಂತೆ ಪ್ರಧಾನಿ ಮತ್ತೆ ಒತ್ತಿ ಹೇಳುವ ಸಾಧ್ಯತೆ ಇದೆ. ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್‌–19 ದೃಢ ಪ್ರಕರಣಗಳ ಸಂಖ್ಯೆ 20,000ಕ್ಕಿಂತಲೂ ಕಡಿಮೆ ದಾಖಲಾಗುತ್ತಿದೆ. ನೂರು ಕೋಟಿ ಲಸಿಕೆ ಡೋಸ್‌ಗಳ ಬಲವಾದ ಸುರಕ್ಷಾ ಕವಚವನ್ನು ಭಾರತವು ಈಗ ಹೊಂದಿದೆ. ಇದು ಭಾರತದ ಪೌರರ ಸಾಧನೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು