12 ನೇ ತರಗತಿ ಪರೀಕ್ಷೆ: ಪ್ರಧಾನಿ ಮೋದಿ ಇಂದು ಮಹತ್ವದ ಸಭೆ

ನವದೆಹಲಿ: ಕೋವಿಡ್ ಹಿನ್ನೆಲೆಯಲ್ಲಿ 12 ನೇ ತರಗತಿ ಪರೀಕ್ಷೆಗಳನ್ನು ನಡೆಸಬೇಕೋ? ಬೇಡವೋ? ಎಂಬುದರ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ (ಮಂಗಳವಾರ) ಮಹತ್ವದ ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ಪ್ರಧಾನಿಯವರು ಪರೀಕ್ಷೆ ಕುರಿತು ಏನು ಮಾಡಬೇಕು ಎಂಬುದರ ಕುರಿತು ತಜ್ಞರಿಂದ ಹಾಗೂ ಅಧಿಕಾರಿಗಳಿಂದ ಸಲಹೆಗಳನ್ನು ಸ್ವೀಕರಿಸಲಿದ್ದಾರೆ. ಬಳಿಕ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.
ಕೊರೊನಾ ಸೋಂಕು ವ್ಯಾಪಕವಾಗಿದ್ದರ ಪರಿಣಾಮ ಸಿಬಿಎಸ್ಇ ಏಪ್ರಿಲ್ 18 ರಂದು ದೇಶಾದ್ಯಂತ ತನ್ನ ವ್ಯಾಪ್ತಿಯ 10 ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿತ್ತು. ಅಲ್ಲದೇ 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿತ್ತು.
ಕೇಂದ್ರ ಶಿಕ್ಷಣ ಇಲಾಖೆ ಕೂಡ ಪರೀಕ್ಷೆಗಳನ್ನು ನಡೆಸಬೇಕೋ ಬೇಡವೋ ಎಂಬುದರ ಬಗ್ಗೆ ರಾಜ್ಯಗಳಿಂದ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಸಲಹೆಗಳನ್ನು ಸ್ವೀಕರಿಸಿತ್ತು.
ಅಲ್ಲದೇ ಪರೀಕ್ಷೆಗಳನ್ನು ರದ್ದು ಮಾಡುವಂತೆ ಸುಪ್ರೀಂಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ಅರ್ಜಿ ಕುರಿತಂತೆ, ಜೂನ್ 3ರ ಒಳಗಾಗಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂಗೆ ತಿಳಿಸಿದೆ.
ಇದನ್ನೂ ಓದಿ: ಆರ್ಥಿಕ ಕರಾಳತೆ, ಸರ್ಕಾರ ನೋಟು ಮುದ್ರಿಸಬೇಕಾದ ಪರಿಸ್ಥಿತಿ ಬಂದಿದೆ: ಪಿ ಚಿದಂಬರಂ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.