ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ದೇಶದ 100 ಜಿಲ್ಲಾಧಿಕಾರಿಗಳ ಜೊತೆ 18, 20ರಂದು ಪ್ರಧಾನಿ ಚರ್ಚೆ

Last Updated 13 ಮೇ 2021, 13:08 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಅತ್ಯಧಿಕ ಕೋವಿಡ್‌ ಪ್ರಕರಣಗಳು ದಾಖಲಾಗುತ್ತಿರುವ 100 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮೇ 18, 20ರಂದು ಸಮಾಲೋಚಿಸುವರು.

ಸರ್ಕಾರದ ಮೂಲಗಳ ಪ್ರಕಾರ, ಮೊದಲ ದಿನ 9 ರಾಜ್ಯಗಳ 46 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಎರಡನೇ ದಿನ 10 ರಾಜ್ಯಗಳ 54 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಪ್ರಧಾನಿ ಚರ್ಚಿಸಲಿದ್ದಾರೆ. ಸಂವಹನದ ವೇಳೆ ಆಯಾ ರಾಜ್ಯಗಳ ಮುಖ್ಯಮಂತ್ರಿ ಕೂಡಾ ಭಾಗವಹಿಸುವರು.

ಕೋವಿಡ್ ಪರಿಸ್ಥಿತಿ ಗಂಭೀರವಾದ ಬಳಿಕ ಪ್ರಧಾನಿ ಹೀಗೆ ಜಿಲ್ಲಾ ಹಂತದಲ್ಲಿ ಆಡಳಿತ ಅಧಿಕಾರಿಗಳ ಜೊತೆಗೆ ಚರ್ಚಿಸುತ್ತಿರುವುದು ಇದೇ ಮೊದಲು. ಇದುವರೆಗೂ ಮುಖ್ಯಮಂತ್ರಿಗಳ ಜೊತೆಗೆ ವಿವಿಧ ಸಭೆ ನಡೆಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಶೇ 72ರಷ್ಟು ಹೊಸ ಸೋಂಕು ಪ್ರಕರಣಗಳು, ಶೇ 74.30ರಷ್ಟು ಸಾವಿನ ಪ್ರಕರಣಗಳು 10 ರಾಜ್ಯಗಳಲ್ಲಿ ದಾಖಲಾಗುತ್ತಿವೆ. ಈ ರಾಜ್ಯಗಳು– ಮಹಾರಾಷ್ಟ್ರ, ದೆಹಲಿ, ಹರಿಯಾಣ, ಉತ್ತರ ಪ್ರದೇಶ, ಕೇರಳ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ರಾಜಸ್ಥಾನ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT