ಗುರುವಾರ , ಆಗಸ್ಟ್ 11, 2022
26 °C
ಮೋದಿ ಸ್ವಾಗತಕ್ಕೆ ಭೀಮಾವರಂ ಪಟ್ಟಣದಲ್ಲಿ ಭರದ ಸಿದ್ಧತೆ

ಜು.4ರಂದು ಪ್ರಧಾನಿಯಿಂದ ಅಲ್ಲೂರಿ ಪ್ರತಿಮೆ ಅನಾವರಣ 

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಮರಾವತಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಆಂಧ್ರಪ್ರದೇಶದ ಭೀಮಾವರಂ ಪಟ್ಟಣದ ಉದ್ಯಾನದಲ್ಲಿ ಸ್ವಾತಂತ್ರ್ಯ ಸೇನಾನಿ ಅಲ್ಲೂರಿ ಸೀತಾರಾಮ ರಾಜು ಅವರ ಪ್ರತಿಮೆಯನ್ನು ಜುಲೈ 4ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಲಿದ್ದಾರೆ.

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಭೀಮಾವರಂ ಪಟ್ಟಣದಲ್ಲಿ ನಡೆದಿರುವ ಸಿದ್ಧತೆಗಳನ್ನು ವಿಶೇಷ ಮುಖ್ಯ ಕಾರ್ಯದರ್ಶಿ (ಪ್ರವಾಸೋದ್ಯಮ ಮತ್ತು ಸಂಸ್ಕೃತಿ) ರಜತ್‌ ಭಾರ್ಗವ ಗುರುವಾರ ಪರಿಶೀಲಿಸಿದರು.

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ನಾಲ್ಕು ಹೆಲಿಪ್ಯಾಡ್‌ಗಳನ್ನು ಸಿದ್ಧಪಡಿಸಲಾಗಿದೆ. ಎಸ್‌ಪಿಜಿ ಸಿಬ್ಬಂದಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ಭಾರ್ಗವ ತಿಳಿಸಿದರು.

ಅಂದು ಪ್ರಧಾನಿ ಮೋದಿ ಅವರು ಹೈದರಾಬಾದ್‌ನಿಂದ ವಿಶೇಷ ವಿಮಾನದಲ್ಲಿ ಗನ್ನಾವರಂನ ವಿಜಯವಾಡ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ನಂತರ ಹೆಲಿಕಾಪ್ಟರ್‌ನಲ್ಲಿ ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮಾವರಂಗೆ ತಲುಪಲಿದ್ದಾರೆ. ಅಲ್ಲೂರಿ ಸೀತಾರಾಮ ರಾಜು ಅವರ 125ನೇ ಜನ್ಮದಿನದ ಸ್ಮರಣಾರ್ಥ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಭೀಮಾವರಂ ಉದ್ಯಾನದಲ್ಲಿ ಸ್ಥಾಪಿಸಿರುವ ಅಲ್ಲೂರಿ ಸೀತಾರಾಮ ರಾಜು ಅವರ 30 ಅಡಿಯ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಇದೇ ವೇಳೆ ಸಾರ್ವಜನಿಕ ಸಭೆಯಲ್ಲಿ ಮೋದಿ ಭಾಷಣ ಮಾಡಲಿದ್ದಾರೆ. ನಂತರ ಮಧ್ಯಾಹ್ನ 1.10ಕ್ಕೆ ವಿಜಯವಾಡ ವಿಮಾನ ನಿಲ್ದಾಣದಿಂದ ನವದೆಹಲಿಗೆ ವಾಪಸಾಗಲಿದ್ದಾರೆ ಎಂದು ಪ್ರಧಾನಿ ಕಚೇರಿ ಬಿಡುಗಡೆ ಮಾಡಿರುವ ಪ್ರವಾಸ ಪಟ್ಟಿಯಲ್ಲಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು