ಭಾನುವಾರ, ಆಗಸ್ಟ್ 1, 2021
21 °C

ಯುಪಿಯಲ್ಲಿ ಪ್ರಿಯಾಂಕಾ ಅವರೇ ಕ್ಯಾಪ್ಟನ್: ಕಾಂಗ್ರೆಸ್‌ ನಾಯಕ ಸಲ್ಮಾನ್‌ ಖುರ್ಷಿದ್‌

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ನವದೆಹಲಿ: ಉತ್ತರ ಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿ ಅವರು ಕ್ಯಾಪ್ಟನ್‌ ಆಗಿ ಪಕ್ಷವನ್ನು ಮುನ್ನೆಡೆಸಲಿದ್ದಾರೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಸಲ್ಮಾನ್‌ ಖುರ್ಷಿದ್‌ ಹೇಳಿದ್ದಾರೆ.

ಈ ವಿಚಾರವಾಗಿ ಸುದ್ದಿಸಂಸ್ಥೆ ಪಿಟಿಐಗೆ ಹೇಳಿಕೆ ನೀಡಿರುವ ಅವರು, 'ಉತ್ತರ ಪ್ರದೇಶದ ಮತದಾರರ ಮುಂದೆ ತಮ್ಮನ್ನು ತಾವು ಹೇಗೆ ಪ್ರಸ್ತುತ ಪಡಿಸಿಕೊಳ್ಳಬೇಕು ಎಂಬುದನ್ನು ಪ್ರಿಯಾಂಕಾ ಅವರೇ ನಿರ್ಧರಿಸಲಿದ್ದಾರೆ. ಅವರು ರಾಜ್ಯದಲ್ಲಿ ಪಕ್ಷದ ಉಸ್ತುವಾರಿಯನ್ನು ಮುನ್ನಡೆಸಲಿದ್ದಾರೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಪ್ರಿಯಾಂಕಾ ಗಾಂಧಿಯೇ ಕ್ಯಾಪ್ಟನ್‌' ಎಂದು ಸಲ್ಮಾನ್‌ ಖುರ್ಷಿದ್‌ ಪ್ರತಿಪಾದಿಸಿದ್ದಾರೆ.

'ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬಿಜೆಪಿಗೆ ಕಠಿಣ ಎದುರಾಳಿಯಾಗಲಿದೆ. ಪಕ್ಷವು ತನ್ನ ಎಲ್ಲ ಶಕ್ತಿಯಿಂದ ಚುನಾವಣೆಯನ್ನು ಎದುರಿಸಲಿದೆ. ಈ ಬಗ್ಗೆ ಪ್ರಿಯಾಂಕಾ ಗಾಂಧಿ ನಿರ್ಧರಿಸಲಿದ್ದಾರೆ' ಎಂದು ಖುರ್ಷಿದ್‌ ಹೇಳಿದ್ದಾರೆ.

'ಪ್ರಿಯಾಂಕಾ ಅವರು ಉತ್ತರ ಪ್ರದೇಶದ ನಾಯಕತ್ವದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ನಮ್ಮ ಮಟ್ಟಿಗೆ ಅವರೊಬ್ಬ ನಾಯಕಿ. ಅವರು ನಮ್ಮನ್ನು ಮುನ್ನಡೆಸಲಿದ್ದಾರೆ' ಎಂದು ಖುರ್ಷಿದ್ ತಿಳಿಸಿದ್ದಾರೆ.

2022ರ ಮಾರ್ಚ್‌ನಲ್ಲಿ ಉತ್ತರ ಪ್ರದೇಶ ವಿಧಾನ ಸಭೆಗೆ ಚುನಾವಣೆ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು