ಶನಿವಾರ, ಏಪ್ರಿಲ್ 1, 2023
23 °C

ಕಾಶ್ಮೀರದಲ್ಲಿ ಭಾರತ್ ಜೋಡೊ ಯಾತ್ರೆ: ರಾಹುಲ್ ಜತೆ ಹೆಜ್ಜೆ ಹಾಕಿದ ಪ್ರಿಯಾಂಕಾ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಶ್ರೀನಗರ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆಯಲ್ಲಿ ಶನಿವಾರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪಾಲ್ಗೊಂಡಿದ್ದಾರೆ. 

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದ ಮೂಲಕ ಯಾತ್ರೆ ಸಾಗುತ್ತಿದೆ. ಇದೇ ವೇಳೆ ಪ್ರಿಯಾಂಕಾ ಗಾಂಧಿ , ರಾಹುಲ್ ಜತೆ ಹೆಜ್ಜೆ ಹಾಕುವ ಮೂಲಕ ಗಮನ ಸೆಳೆದಿದ್ದಾರೆ. 

ಶುಕ್ರವಾರ ಮಧ್ಯಾಹ್ನವಷ್ಟೆ ಯಾತ್ರೆಯು ಜಮ್ಮು–ಕಾಶ್ಮೀರವನ್ನು ಪ್ರವೇಶಿಸಿತ್ತು.

‘ಜಮ್ಮು–ಕಾಶ್ಮೀರ ಆಡಳಿತದಿಂದ ಗಂಭೀರ ಸ್ವರೂಪದ ಭದ್ರತಾ ಲೋಪವಾಗಿದೆ’ ಎಂದು ಆರೋಪಿಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ದಿನದ ಮಟ್ಟಿಗೆ ಭಾರತ್ ಜೋಡೊ ಯಾತ್ರೆಯನ್ನು ಶುಕ್ರವಾರ ರದ್ದು ಮಾಡಿದ್ದರು.

ಯಾತ್ರೆಯನ್ನು ರದ್ದುಗೊಳಿಸಿದ ನಂತರ ಅನಂತನಾಗ್ ಜಿಲ್ಲೆಯ ಖಾನಾಬಾಲ್‌ನಲ್ಲಿ ದಿಢೀರ್‌ ಪತ್ರಿಕಾಗೋಷ್ಠಿ ನಡೆಸಿದ್ದ ರಾಹುಲ್‌, ‘ಬನಿಹಾಲ್‌ನಿಂದ ಕಾಜಿಗುಂಡಕ್ಕೆ ತೆರಳುವಾಗ, ಯಾತ್ರೆಯು ಜವಾಹರ್‌ ಸುರಂಗ ದಾಟುತ್ತಿದ್ದಂತೆಯೇ ನನ್ನ ಸ್ವಾಗತಕ್ಕಾಗಿ ಜನರು ದೊಡ್ಡ ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದರು. ಆದರೆ, ಈ ಜನರನ್ನು ನಿಯಂತ್ರಿಸಲು ಒಬ್ಬ ಪೊಲೀಸ್‌ ಸಿಬ್ಬಂದಿಯೂ ಇರಲಿಲ್ಲ’ ಎಂದು ಆರೋಪಿಸಿದ್ದರು. 

2022 ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಿಂದ ಆರಂಭವಾಗಿರುವ ಭಾರತ್ ಜೋಡೊ ಯಾತ್ರೆಯು ಜನವರಿ 30ರಂದು ಶ್ರೀನಗರದಲ್ಲಿ ಕೊನೆಗೊಳ್ಳಲಿದೆ.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ 12 ರಾಜ್ಯಗಳ ಮೂಲಕ ಹಾದುಹೋಗಿದ್ದು, 3570 ಕಿ.ಮೀ. ದೂರ ಕ್ರಮಿಸಲಿದೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು