ಬುಧವಾರ, ಅಕ್ಟೋಬರ್ 5, 2022
28 °C

ಪ್ರಿಯಾಂಕಾ ಗಾಂಧಿಗೆ ಕೋವಿಡ್‌: ರಾಹುಲ್ ಗಾಂಧಿ ರಾಜಸ್ಥಾನ ಪ್ರವಾಸ ರದ್ದು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಮತ್ತೊಮ್ಮೆ ಕೋವಿಡ್‌ ಸೋಂಕು ತಗುಲಿರುವುದು ಖಚಿತವಾಗಿದ್ದು, ಮನೆಯಲ್ಲಿ ಪ್ರತ್ಯೇಕ ವಾಸದಲ್ಲಿದ್ದಾರೆ. 

ಪ್ರಿಯಾಂಕಾ ಸೇರಿದಂತೆ ಪಕ್ಷದ ಇತರೆ ನಾಯಕರಿಗೆ ಸೋಂಕು ತಗುಲಿರುವುದರಿಂದ ಮುನ್ನೆಚ್ಚರಿಕೆಯಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಜಸ್ಥಾನ ಪ್ರವಾಸ ರದ್ದುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ರಾಜಸ್ಥಾನದ ಅಲ್ವಾರ್ ಜಿಲ್ಲೆಯ ತಿಜಾರಾದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ತರಬೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ರಾಹುಲ್ ಮಾತನಾಡಬೇಕಿತ್ತು. ಕಳೆದ ಜೂನ್‌ನಲ್ಲಿ ಪ್ರಿಯಾಂಕಾಗೆ ಕೋವಿಡ್ ತಗುಲಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು