ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಟ್ಟಿ ಧ್ವನಿ ವಿರುದ್ಧ ಕೇಂದ್ರದ ದಮನಕಾರಿ ನೀತಿ: ಪ್ರಿಯಾಂಕಾ

Last Updated 11 ಮಾರ್ಚ್ 2023, 14:27 IST
ಅಕ್ಷರ ಗಾತ್ರ

ನವದೆಹಲಿ: ಬಿಜೆಪಿ ನೇತೃತ್ವದ ಸರ್ಕಾರವು ವಿರೋಧ ಪಕ್ಷಗಳ ಗಟ್ಟಿ ದನಿಗಳನ್ನು ದಮನಿಸುವ ರಾಜಕೀಯ ಮಾಡುತ್ತಿದೆ. ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರ ವಿರುದ್ಧ ಸಿಬಿಐ ತೆಗೆದುಕೊಂಡ ಕ್ರಮ ಕೂಡಾ ಈ ದಮನಕಾರಿ ನೀತಿಯ ಭಾಗವಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶನಿವಾರ ಹೇಳಿದರು.

ಆರೋಪಿತ ‘ಉದ್ಯೋಗಕ್ಕಾಗಿ ಭೂಮಿ ಹರಗಣ’ಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ತೇಜಸ್ವಿ ಯಾದವ್ ಅವರಿಗೆ ಸಿಬಿಐ ಸಮನ್ಸ್‌ ನೀಡಿದ ಬಳಿಕ ಸರ್ಕಾರದ ವಿರುದ್ಧ ಪ್ರಿಯಾಂಕಾ ಟ್ವೀಟ್‌ ಮೂಲಕ ಕಿಡಿಕಾರಿದ್ದಾರೆ. ‘ವಿರೋಧ ಪಕ್ಷಗಳ ಗಟ್ಟಿ ಧ್ವನಿಗಳ ಕುರಿತು ಬಿಜೆಪಿ ಸರ್ಕಾರಕ್ಕೆ ಭಯವೇಕೆ. ಸರ್ಕಾರವನ್ನು ಪ್ರಶ್ನಿಸುವವರ ವಿರುದ್ಧ ದಮನಕಾರಿ ನೀತಿಯನ್ನು ಸರ್ಕಾರ ಅನುಸರಿಸುತ್ತಿದೆ. ತೇಜಸ್ವಿ ಯಾದವ್‌ ಅವರ ವಿರುದ್ಧದ ಕ್ರಮವೂ ಇಂಥದ್ದೇ ರಾಜಕೀಯ ಪ್ರೇರಿತವಾಗಿದೆ. ಸಾರ್ವಜನಿಕರು ಇದನ್ನೆಲ್ಲಾ ನೋಡುತ್ತಿದ್ದಾರೆ ಮತ್ತು ಇದೆಲ್ಲವನ್ನೂ ನೆನಪಿನಲ್ಲಿರಿಸಿಕೊಂಡಿರುತ್ತಾರೆ’ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT