ಮಂಗಳವಾರ, ಮಾರ್ಚ್ 21, 2023
29 °C
ಉತ್ತರ ಪ್ರದೇಶದ ಯೋಗಿ ಸರ್ಕಾರದ ವಿರುದ್ಧ ಟೀಕೆ

ದಲಿತರ ಮೇಲಿನ ದೌರ್ಜನ್ಯ ತಡೆಗೆ ಪ್ರಿಯಾಂಕಾ ಗಾಂಧಿ ಒತ್ತಾಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಉತ್ತರ ಪ್ರದೇಶದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದರೂ, ಇವುಗಳನ್ನು ನಿಯಂತ್ರಿಸುವಲ್ಲಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ತೀವ್ರವಾಗಿ ಹದಗೆಡುತ್ತಿದ್ದರೂ, ಆಡಳಿತಾರೂಢ ಬಿಜೆಪಿ ಸರ್ಕಾರ ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ಉತ್ತರ ಪ್ರದೇಶದ ಮಹೋಬ, ಆಗ್ರಾ, ಗೋರಖ್‌ಪುರ, ರಾಯ್‌ಬರೇಲಿ, ಹೊರಡಿಯಲ್ಲಿ ದಲಿತರ ಹತ್ಯೆ ಪ್ರಕರಣಗಳು ನಡೆದಿವೆ. ಹಲವು ಕಡೆ ದಲಿತರ ಮೇಲೆ ದೌರ್ಜನ್ಯಗಳು ನಡೆದಿವೆ. ಎಲ್ಲೆಲ್ಲಿ ಇಂಥ ಪ್ರಕರಣಗಳು ನಡೆದಿವೆ ಎಂದು ಪಟ್ಟಿ ಮಾಡಿ, ವರದಿ ತಯಾರಿಸಿ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ. 

‘ಉತ್ತರ ಪ್ರದೇಶದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ನಿಲ್ಲಿಸುವ ಕುರಿತು ಬಿಜೆಪಿ ಏಕೆ ಮಾತನಾಡುತ್ತಿಲ್ಲ‘ ಎಂದು ಕಾಂಗ್ರೆಸ್‌ ನಾಯಕಿ ಪ್ರಶ್ನಿಸಿದ್ದಾರೆ. 

ರಾಜ್ಯ ಸರ್ಕಾರ ಇಂಥ ಘಟನೆಗಳ ಬಗ್ಗೆ ನಿರ್ಲಕ್ಷ್ಯವಹಿಸುವುದನ್ನು ಬಿಟ್ಟು ಸೂಕ್ತ ಕ್ರಮ ಕೈಗೊಳ್ಳಬೇಕು‘ ಎಂದು ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು