ಶನಿವಾರ, ಸೆಪ್ಟೆಂಬರ್ 26, 2020
26 °C

ಐದು ವರ್ಷದ ಗುತ್ತಿಗೆಯಡಿ ಸರ್ಕಾರಿ ನೌಕರರ ನೇಮಕ: ಪ್ರಿಯಾಂಕ ಕಿಡಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಗ್ರೂಪ್‌ ‘ಬಿ’ ಮತ್ತು ‘ಸಿ’ ಹುದ್ದೆಗಳಿಗೆ ಐದು ವರ್ಷದ ಗುತ್ತಿಗೆಯಡಿ ಸರ್ಕಾರಿ ನೌಕರರನ್ನು ನೇಮಕ ಮಾಡಿಕೊಳ್ಳಲು ಉತ್ತರ ಪ್ರದೇಶ ಸರ್ಕಾರ ಚಿಂತನೆ ನಡೆಸಿದ ಎನ್ನುವ ಮಾಧ್ಯಮದ ವರದಿಯನ್ನು ಆಧಾರವಾಗಿಟ್ಟುಕೊಂಡು, ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ.

‘ಸರ್ಕಾರದ ಈ ನಡೆ ಯುವಜನರ ನೋವನ್ನು ಮತ್ತಷ್ಟು ಹೆಚ್ಚಿಸಲಿದೆ’ ಎಂದು ಪ್ರಿಯಾಂಕ ಆರೋಪಿಸಿದ್ದಾರೆ.

‘ಇಂಥ ಕಾನೂನುಗಳ ಬಗ್ಗೆ ಈ ಹಿಂದೆಯೇ ಸುಪ್ರೀಂ ಕೋರ್ಟ್‌ ವಿಮರ್ಶಾತ್ಮಕ ಪ್ರತಿಕ್ರಿಯೆಗಳನ್ನು ನೀಡಿದೆ. ಈ ಕಾನೂನನ್ನು ತರುವ ಉದ್ದೇಶವಾದರೂ ಏನು? ಯುವಜನರ ನೋವನ್ನು ಪರಿಹರಿಸುವ ಬದಲು, ಆ ನೋವನ್ನು ಮತ್ತಷ್ಟು ಹೆಚ್ಚಿಸುವ ಯೋಜನೆಗಳನ್ನು ಸರ್ಕಾರ ತರುತ್ತಿದೆ’ ಎಂದು ಪ್ರಿಯಾಂಕ ಟ್ವೀಟ್‌ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು