ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಕೋವಿಡ್ ದೃಢ, ಮನೆಯಲ್ಲೇ ಪ್ರತ್ಯೇಕವಾಸ

ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಪ್ರಿಯಾಂಕಾಗಾಂಧಿವಾದ್ರಾಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ಕೊರೊನಾ ಸೋಂಕಿನ ಸೌಮ್ಯ ಲಕ್ಷಣಗಳಿರುವ ಕಾರಣಕ್ಕೆ ನಾನು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೆ. ಇದೀಗ ವರದಿ ಪಾಸಿಟಿವ್ ಬಂದಿದೆ.ಮಾರ್ಗಸೂಚಿಗಳನ್ನು ಪಾಲಿಸುತ್ತಿದ್ದು,ವೈದ್ಯರ ಸಲಹೆ ಮೇರೆಗೆ ಪ್ರತ್ಯೇಕವಾಸದಲ್ಲಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ನನ್ನ ಸಂಪರ್ಕಕ್ಕೆ ಬಂದವರು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಪ್ರಿಯಾಂಕಾ ಮನವಿ ಮಾಡಿದ್ದಾರೆ.

ಇತ್ತ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೂ ಗುರುವಾರ ಕೋವಿಡ್‌ ದೃಢಪಟ್ಟಿದ್ದು, ಮನೆಯಲ್ಲೇ ಪ್ರತೇಕವಾಸದಲ್ಲಿದ್ದಾರೆ.

ರಾಷ್ಟ್ರದಲ್ಲಿ ದೈನಂದಿನ ಕೋವಿಡ್‌-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಹೊಸದಾಗಿ 4,041 ಮಂದಿಗೆ ಸೋಂಕು ತಗುಲಿದೆ. 10 ಮಂದಿ ಕೋವಿಡ್‌ ಕಾರಣದಿಂದ ಮೃತಪಟ್ಟಿದ್ದಾರೆ.

ಇದರೊಂದಿಗೆ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 4,31,68,585ಕ್ಕೆ ತಲುಪಿದೆ. ಮೃತರ ಸಂಖ್ಯೆ ಒಟ್ಟು 5,24,651ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆಗೊಳಿಸಿದ ಮಾಹಿತಿಯಲ್ಲಿ ತಿಳಿಸಿದೆ.

ಒಟ್ಟು 21,177 ಸಕ್ರಿಯ ಕೋವಿಡ್‌ ಪ್ರಕರಣಗಳ ಪೈಕಿ ಕಳೆದ 24 ಗಂಟೆಯಲ್ಲಿ 1,668 ಸಕ್ರಿಯ ಪ್ರಕರಣಗಳು ಸೇರ್ಪಡೆಗೊಂಡಿವೆ.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT