ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತನ್ನದೇ ನಿಯಮಗಳನ್ನು ಟ್ವಿಟರ್‌ ಪಾಲಿಸುತ್ತಿದೆಯಾ: ಪ್ರಿಯಾಂಕಾ ಗಾಂಧಿ ವಾಗ್ದಾಳಿ

Last Updated 12 ಆಗಸ್ಟ್ 2021, 15:29 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್‌ ಪಕ್ಷದ ಕೆಲ ಮುಖಂಡರ ಖಾತೆಗಳನ್ನು ಅಮಾನತು ಮಾಡಿರುವ ಹಿನ್ನೆಲೆಯಲ್ಲಿ ಟ್ವಿಟರ್‌ ವಿರುದ್ಧ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ನೇತೃತ್ವದ ಸರ್ಕಾರದೊಂದಿಗೆ ಕೈಜೋಡಿಸುವ ಮೂಲಕ ಪ್ರಜಾತಂತ್ರವನ್ನು ಹತ್ತಿಕ್ಕುವ ಕೃತ್ಯದಲ್ಲಿ ಟ್ವಿಟರ್‌ ಭಾಗಿಯಾಗಿದೆ ಎಂದು ಪ್ರಿಯಾಂಕಾ ಆರೋಪಿಸಿದ್ದಾರೆ.

ಈ ವಿಚಾರವಾಗಿ ಗುರುವಾರ ಟ್ವೀಟ್‌ ಮಾಡಿರುವ ಅವರು, 'ಕಾಂಗ್ರೆಸ್ ನಾಯಕರ ಖಾತೆಗಳನ್ನು ಅಮಾನತು ಮಾಡಿರುವ ಟ್ವಿಟರ್‌ ತನ್ನದೇ ನಿಯಮಗಳನ್ನು ಪಾಲಿಸುತ್ತಿದೆಯಾ ಅಥವಾ ಮೋದಿ ಸರ್ಕಾರದ ನೀತಿಯನ್ನು ಅನುಸರಿಸುತ್ತಿದೆಯಾ?' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ನಮ್ಮ ನಾಯಕರು ಟ್ವೀಟ್‌ ಮಾಡಿದ ಚಿತ್ರಗಳನ್ನು ಹೋಲುವಂತಹ ಚಿತ್ರಗಳನ್ನೇ ಸುಪ್ರೀಂ ಕೋರ್ಟ್‌ ಆಯೋಗವು ಈ ಹಿಂದೆ ಟ್ವೀಟ್‌ ಮಾಡಿತ್ತು. ಆಯೋಗದ ಖಾತೆಯನ್ನು ಏಕೆ ಅಮಾನತು ಮಾಡಲಿಲ್ಲ?' ಎಂದು ಪ್ರಿಯಾಂಕಾ ಪ್ರಶ್ನಿಸಿದ್ದಾರೆ.

ಕಳೆದ ವಾರ ದೆಹಲಿಯಲ್ಲಿ ನಡೆದ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಕುಟುಂಬಸ್ಥರ ಜೊತೆಗಿನ ಫೋಟೊವನ್ನು ರಾಹುಲ್‌ ಗಾಂಧಿ ಸೇರಿ ಹಲವು ಕಾಂಗ್ರೆಸ್‌ ನಾಯಕರು ಟ್ವೀಟ್‌ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಧಿಕೃತ ಟ್ವಿಟರ್‌ ಖಾತೆ ಸೇರಿದಂತೆ ಹಲವು ನಾಯಕರ ಖಾತೆಯನ್ನೂ ಸಹ ಲಾಕ್‌ ಮಾಡಲಾಗಿದೆ.

ಇವುಗಳನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT