ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗಿ ಭದ್ರಕೋಟೆಗೆ ಪ್ರಿಯಾಂಕಾ ಲಗ್ಗೆ

Last Updated 22 ಅಕ್ಟೋಬರ್ 2021, 18:54 IST
ಅಕ್ಷರ ಗಾತ್ರ

ಲಖನೌ:ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ನ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರ ವಾರಾಣಸಿಯಿಂದ ಚಾಲನೆ ನೀಡಿದ್ದ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು, ಈ ತಿಂಗಳ ಅಂತ್ಯಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಕ್ಷೇತ್ರ ಗೋರಖಪುರದಲ್ಲಿ ಪ್ರಚಾರ ನಡೆಸಲಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಚೈತನ್ಯ ತುಂಬಲು ಶ್ರಮಿಸುತ್ತಿರುವ ಪ್ರಿಯಾಂಕಾ ಗಾಂಧಿ ಅವರು ಗೋರಖಪುರದಲ್ಲಿ ಈ ತಿಂಗಳ ಅಂತ್ಯದ ವೇಳೆಗೆ ಬೃಹತ್ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಕ್ಷೇತ್ರ ಮತ್ತು ಭದ್ರಕೋಟೆಯಾಗಿರುವ ಗೋರಖಪುರದಲ್ಲಿ ನಡೆಯಲಿರುವ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ಬಗ್ಗೆ ಅಲ್ಲಿನ ಪಕ್ಷದ ನಾಯಕರಿಗೆ ಪ್ರಿಯಾಂಕಾ ಅವರು ಸೂಚನೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.

ಬಾರಾಬಂಕಿ ಜಿಲ್ಲೆಯಲ್ಲಿ ಶನಿವಾರ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್‌ನ ‘ಪ್ರತಿಜ್ಞಾ ಯಾತ್ರೆ’ಗೆ ಚಾಲನೆ ನೀಡಲಿದ್ದಾರೆ. ರಾಜ್ಯದ ಜನತೆಗಾಗಿ ಪಕ್ಷವು ಕೈಗೊಳ್ಳಲಿರುವ ಮತ್ತಷ್ಟು ಪ್ರತಿಜ್ಞೆಗಳ ವಿಚಾರವನ್ನು ಅವರು ಜನರ ಮುಂದೆ ಇರಿಸಲಿದ್ದಾರೆ ಎಂದು ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕಿ ಆರಾಧನಾ ಮಿಶ್ರಾ ಅವರು ಮಾಹಿತಿ ನೀಡಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಪಕ್ಷವು ಶೇ 40ರಷ್ಟು ಟಿಕೆಟ್‌ಗಳನ್ನು ಮಹಿಳೆಯರಿಗೆ ನೀಡುವ, ಅಧಿಕಾರಕ್ಕೆ ಬಂದರೆ ಪ್ರೌಢಶಾಲಾ ಶಿಕ್ಷಣ ಪೂರ್ಣಗೊಳಿಸಿದ ಎಲ್ಲಾ ಬಾಲಕಿಯರಿಗೆ ಸ್ಮಾರ್ಟ್‌ಫೋನ್‌ ನೀಡುವ ಮತ್ತು ಪದವಿ ಪೂರ್ಣಗೊಳಿಸಿದ ಎಲ್ಲಾ ಹೆಣ್ಣುಮಕ್ಕಳಿಗೆ ಇ-ಸ್ಕೂಟರ್ ನೀಡುವ ಪ್ರತಿಜ್ಞೆಯನ್ನು ಕಾಂಗ್ರೆಸ್‌ ಕೈಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT