ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಬರ್ಟ್ ವಾದ್ರಾಗೆ ಕೋವಿಡ್: ಪ್ರಿಯಾಂಕಾ ಪ್ರತ್ಯೇಕವಾಸ, ಚುನಾವಣಾ ‍ಪ್ರಚಾರ ರದ್ದು

Last Updated 2 ಏಪ್ರಿಲ್ 2021, 10:42 IST
ಅಕ್ಷರ ಗಾತ್ರ

ನವದೆಹಲಿ: ಪತಿ ರಾಬರ್ಟ್ ವಾದ್ರಾ ಅವರಿಗೆ ಕೋವಿಡ್ ಸೋಂಕು ದೃಢಪಟ್ಟ ಕಾರಣ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರತ್ಯೇಕ ವಾಸಕ್ಕೆ ಒಳಗಾಗಿದ್ದಾರೆ.

ಈ ಕುರಿತು ಶುಕ್ರವಾರ ಟ್ವಿಟರ್‌ನಲ್ಲಿ ವಿಡಿಯೊ ಸಂದೇಶ ಪ್ರಕಟಿಸಿರುವ ಅವರು, ಅಸ್ಸಾಂ, ಕೇರಳ ಹಾಗೂ ತಮಿಳುನಾಡಿನಲ್ಲಿ ನಿಗದಿಯಾಗಿರುವ ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಪ್ರಿಯಾಂಕಾ ಅವರು ಅಸ್ಸಾಂ, ಕೇರಳ ಹಾಗೂ ತಮಿಳುನಾಡುಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದರು. ಆದರೆ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿಲ್ಲ.

‘ಸೋಂಕಿತರ ಸಂಪರ್ಕಕ್ಕೆ ಬಂದ ಕಾರಣ ನಾನು ಇಂದಿನ ಅಸ್ಸಾಂ ಪ್ರವಾಸವನ್ನು ರದ್ದುಗೊಳಿಸಬೇಕಾಗಿದೆ. ಹಾಗೆಯೇ ನಾಳೆ ಕೇರಳ ಹಾಗೂ ತಮಿಳುನಾಡಿನಲ್ಲಿ ಆಯೋಜಿಸಿರುವ ಚುನಾವಣಾ ಪ್ರಚಾರಗಳನ್ನು ರದ್ದುಪಡಿಸಿದ್ದೇನೆ. ನನ್ನ ಕೋವಿಡ್ ಪರೀಕ್ಷಾ ವರದಿಯು ನೆಗೆಟಿವ್ ಬಂದಿದೆ. ಆದಾಗ್ಯೂ ವೈದ್ಯರ ಸಲಹೆ ಮೇರೆಗೆ ಮುಂದಿನ ಕೆಲವು ದಿನಗಳವರೆಗೆ ಪ್ರತ್ಯೇಕ ವಾಸದಲ್ಲಿ ಇರುತ್ತೇನೆ. ಅನಾನುಕೂಲತೆಗಾಗಿ ನಿಮ್ಮೆಲ್ಲರ ಕ್ಷಮೆಯಾಚಿಸುತ್ತೇನೆ ಮತ್ತು ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವಿಗಾಗಿ ಪ್ರಾರ್ಥಿಸುತ್ತೇನೆ’ ಎಂದು ವಿಡಿಯೊ ಸಂದೇಶದಲ್ಲಿ ಅವರು ಹೇಳಿದ್ದಾರೆ.

ರಾಬರ್ಟ್ ವಾದ್ರಾ ಸಹ ಫೇಸ್‌ಬುಕ್‌ನಲ್ಲಿ ಸಂದೇಶ ಪ್ರಕಟಿಸಿದ್ದು ಕೋವಿಡ್ ಧೃಡಪಟ್ಟಿರುವುದಾಗಿ ಹೇಳಿದ್ದಾರೆ.

‘ದುರದೃಷ್ಟವಶಾತ್, ಸೋಂಕಿತರ ಸಂಪರ್ಕಕ್ಕೆ ಬಂದ ಕಾರಣ ನನಗೆ ಸೋಂಕು ತಗುಲಿದೆ. ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿಲ್ಲವಾದರೂ ಮಾರ್ಗಸೂಚಿ ಪ್ರಕಾರ ನಾನು ಮತ್ತು ಪ್ರಿಯಾಂಕಾ ಪ್ರತ್ಯೇಕ ವಾಸಕ್ಕೆ ಒಳಪಟ್ಟಿದ್ದೇವೆ. ಆಕೆಯ ವರದಿ ನೆಗೆಟಿವ್ ಬಂದಿದೆ. ಅದೃಷ್ಟವಶಾತ್ ಮಕ್ಕಳು ನಮ್ಮ ಜೊತೆಗಿಲ್ಲ ಹಾಗೂ ಕುಟುಂಬದ ಇತರರಿಗೆ ಸೋಂಕು ತಗುಲಿಲ್ಲ. ಸದ್ಯದಲ್ಲೇ ಸಹಜ ಜೀವನಕ್ಕೆ ಮರಳಲಿದ್ದೇವೆ’ ಎಂದು ವಾದ್ರಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT