ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಪ್ರಿಯಾಂಕಾ ಕಿಡಿ

Last Updated 6 ಜನವರಿ 2021, 10:41 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದ ಬದಾಂಯು ಜಿಲ್ಲೆಯಲ್ಲಿ 50 ವರ್ಷದ ಮಹಿಳೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬುಧವಾರ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಮಹಿಳಾ ಭದ್ರತೆಯ ವಿಷಯದಲ್ಲಿ ಉತ್ತರ ಪ್ರದೇಶ ಆಡಳಿತದ ಉದ್ದೇಶಗಳಲ್ಲಿ ದೋಷವಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು,‘ಉತ್ತರ ಪ್ರದೇಶ ಸರ್ಕಾರವು ಹಾಥರಸ್‌ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತರ ಸಮಸ್ಯೆಯನ್ನು ಆಲಿಸಿಲ್ಲ. ಬದಲಿಗೆ ಅಧಿಕಾರಿಗಳನ್ನು ರಕ್ಷಿಸಿ, ಸಂತ್ರಸ್ತರ ಧ್ವನಿಯನ್ನು ನಿಗ್ರಹಿಸಿತು’ ಎಂದು ದೂರಿದ್ದಾರೆ.

‘ಈಗ ಬದಾಂಯು ಜಿಲ್ಲೆಯಲ್ಲೂ ಪೊಲೀಸ್‌ ಅಧಿಕಾರಿಯೊಬ್ಬರು, ಸಂತ್ರಸ್ತರ ಕುಟುಂಬದವರ ಮನವಿಗೆ ಕಿವಿಗೊಡಲಿಲ್ಲ. ಅಷ್ಟೇ ಅಲ್ಲದೆ ಘಟನಾ ಸ್ಥಳವನ್ನು ಪರಿಶೀಲಿಸದೆ ನಿರ್ಲಕ್ಷ್ಯ ತೋರಿದರು. ಮಹಿಳೆಯ ಭದ್ರತೆ ಬಗ್ಗೆ ಉತ್ತರ ಪ್ರದೇಶ ಸರ್ಕಾರದ ಉದ್ದೇಶಗಳಲ್ಲಿ ದೋಷವಿದೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT