ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈರಲ್ ಫೀವರ್‌, ಡೆಂಗ್ಯೂ ಹೆಚ್ಚಳ: ಯುಪಿ ಸರ್ಕಾರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

Last Updated 30 ಆಗಸ್ಟ್ 2021, 11:58 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ 'ವೈರಲ್ ಜ್ವರ' ಮತ್ತು ಡೆಂಗ್ಯೂನಿಂದ ಅನೇಕ ಸಾವುಗಳು ಸಂಭವಿಸುತ್ತಿರುವ ವರದಿಗಳ ನಡುವೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸೋಮವಾರ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಗೊಂಡಿದ್ದಾರೆ. ಜ್ವರ ಹರಡುವುದನ್ನು ತಡೆಯಲು ಮತ್ತು ವೈದ್ಯಕೀಯ ಚಿಕಿತ್ಸೆ ದೊರಕಲು ಸೂಕ್ತ ವ್ಯವಸ್ಥೆ ಮಾಡುವಂತೆ ಅವರು ಒತ್ತಾಯಿಸಿದ್ದಾರೆ.

ಉತ್ತರ ಪ್ರದೇಶದ ಫಿರೋಜಾಬಾದ್, ಮಥುರಾ, ಆಗ್ರಾ ಮತ್ತು ಇತರ ಸ್ಥಳಗಳಲ್ಲಿ ಜ್ವರದಿಂದಾಗಿ ಮಕ್ಕಳು ಸೇರಿದಂತೆ ಅನೇಕ ಜನರು ಮೃತಪಡುತ್ತಿರುವ ಸುದ್ದಿ ದುಃಖಕರ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ರೋಗ ಹರಡುವುದನ್ನು ತಡೆಯಲು ಉತ್ತರ ಪ್ರದೇಶ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಕಾಯಿಲೆಯಿಂದ ಬಳಲುತ್ತಿರುವ ಜನರಿಗೆ ಉತ್ತಮ ಚಿಕಿತ್ಸೆ ನೀಡುವ ವ್ಯವಸ್ಥೆ ಕೂಡ ಮಾಡಬೇಕು' ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಗೌತಮ್ ಬುದ್ಧ ನಗರ ಆಡಳಿತವು ಕಳೆದ ವಾರ 'ವೈರಲ್ ಜ್ವರ'ದ ಬಗ್ಗೆ ಎಚ್ಚರಿಕೆ ನೀಡಿತ್ತು ಮತ್ತು ಆರೋಗ್ಯ ಕಾರ್ಯಕರ್ತರು ಜ್ವರದಿಂದ ಬಳಲುತ್ತಿರುವ ಜನರನ್ನು ಗಮನಿಸುವಂತೆ ಸೂಚಿಸಿತ್ತು.

ವರದಿಗಳ ಪ್ರಕಾರ, ಕೆಲವು ಪಶ್ಚಿಮ ಉತ್ತರ ಪ್ರದೇಶ ಜಿಲ್ಲೆಗಳು ಇತ್ತೀಚಿನ ದಿನಗಳಲ್ಲಿ 'ವೈರಲ್ ಜ್ವರ' ಮತ್ತು ಡೆಂಗ್ಯೂ ಪ್ರಕರಣಗಳು ಹೆಚ್ಚಳಕ್ಕೆ ಸಾಕ್ಷಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT