ವಾಷಿಂಗ್ಟನ್: ಖಾಲಿಸ್ತಾನ ಪರ ಪ್ರತಿಭಟನಕಾರರ ಗುಂಪೊಂದು ಸ್ಯಾನ್‌ಫ್ರಾನ್ಸಿಸ್ಕೊದಲ್ಲಿರುವ ಭಾರತದ ರಾಯಭಾರಿ ಕಚೇರಿಗೆ ಬೆಂಕಿ ಹಚ್ಚಲು ಯತ್ನಿಸಿದ ಘಟನೆ ಭಾನುವಾರ ನಡೆದಿದೆ.
ಭಾರತದ ಹಿರಿಯ ರಾಜತಾಂತ್ರಿಕರು ಅಮೆರಿಕದ ತಮ್ಮ ಸಹವರ್ತಿಗಳಿಗೆ ಈ ಕುರಿತು ಮಾಹಿತಿ ನೀಡಿದ್ದು, ಮುಂಬರುವ ದಿನಗಳಲ್ಲಿ ಇಂತಹ ಇನ್ನಷ್ಟು ದೇಶ ವಿರೋಧಿ ಪ್ರತಿಭಟನೆಗಳು ನಡೆಯುವ ಸಾಧ್ಯತೆ ಇದೆ ಎಂದಿದ್ದಾರೆ.
ಪ್ರತಿಭಟನಕಾರರು ಭಾನುವಾರ ಬೆಳಿಗ್ಗೆ 4.20 ಸುಮಾರಿಗೆ ಬೆಂಕಿ ಹಚ್ಚಲು ಯತ್ನಿಸಿರುವ ದೃಶ್ಯವು ರಾಯಭಾರಿ ಕಚೇರಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
‘ಕ್ಯಾಪ್ ಹಾಕಿಕೊಂಡಿದ್ದ ಇಬ್ಬರು ಗಡ್ಡಧಾರಿಗಳು ಕಚೇರಿಯ ಪ್ರವೇಶ ದ್ವಾರದ ಬಳಿ ದಹನಶೀಲ ವಸ್ತುವನ್ನು ಸುರಿದು ಬೆಂಕಿ ಹಚ್ಚಲು ಪ್ರಯತ್ನಿಸಿದ್ದಾರೆ. ಆದರೆ ಆ ವ್ಯಕ್ತಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ’ ಎಂದು ಮೂಲಗಳು ಸುದ್ದಿಸಂಸ್ಥೆಗೆ ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.