ಶನಿವಾರ, ಸೆಪ್ಟೆಂಬರ್ 25, 2021
22 °C

ವಿಚಾರಣೆಗೆ ಗೈರು: ಪರಮ್‌ ವೀರ್‌ ಸಿಂಗ್‌ ವಿರುದ್ಧ ವಾರಂಟ್‌ ಜಾರಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್ ವಿರುದ್ಧ ಮಾಡಿದ್ದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದ ವಿಚಾರಣೆಗೆ ಹಾಜರಾಗದ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್‌ ವೀರ್‌ ಸಿಂಗ್‌ ವಿರುದ್ಧ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶರ ನೇತೃತ್ವದ ವಿಚಾರಣಾ ಆಯೋಗವು ಮಂಗಳವಾರ ವಾರಂಟ್ ಜಾರಿ ಮಾಡಿದೆ.

ಅನಿಲ್‌ ದೇಶ್‌ಮುಖ್ ಅವರ ವಿರುದ್ಧ ಸಿಂಗ್ ಅವರು ಭ್ರಷ್ಟಾಚಾರ ಆರೋಪ ಮಾಡಿದ್ದು, ಈ ಬಗ್ಗೆ ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರವು ಮಾರ್ಚ್‌ ತಿಂಗಳಲ್ಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೈಲಾಶ್ ಉತ್ತಮ್‌ಚಂದ್‌ ಚಾಂಡಿವಾಲ ನೇತೃತ್ವದಲ್ಲಿ ಏಕಸದಸ್ಯ ವಿಚಾರಣಾ ಆಯೋಗವನ್ನು ರಚಿಸಿತ್ತು.

‘ಈ ಆಯೋಗವು ಹಲವು ಬಾರಿ ವಿಚಾರಣೆಗೆ ಹಾಜರಾಗುವಂತೆ ಪರಮ್‌ ವೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ ಮಾಡಿತ್ತು. ಆದರೂ, ಅವರು ವಿಚಾರಣೆಗೆ ಗೈರು ಹಾಜರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆಯೋಗವು ಅವರ ವಿರುದ್ಧ ಜಾಮೀನು ಸಹಿತ ವಾರಂಟ್‌ ಜಾರಿ ಮಾಡಿದೆ’ ಎಂದು ಸರ್ಕಾರಿ ವಕೀಲರು ತಿಳಿಸಿದರು.

ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಈವರೆಗೆ ಆಯೋಗವು ಮೂರು ಬಾರಿ ಪರಮ್‌ ವೀರ್‌ ಸಿಂಗ್‌ಗೆ ದಂಡ ವಿಧಿಸಿದೆ. ಜೂನ್‌ ತಿಂಗಳಲ್ಲಿ ₹5000 ಮತ್ತು ಕಳೆದ ತಿಂಗಳು ಎರಡು ಸಂದರ್ಭಗಳಲ್ಲಿ ₹25,000 ದಂಡ ವಿಧಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು