ಶುಕ್ರವಾರ, ಡಿಸೆಂಬರ್ 4, 2020
21 °C

ಭಾರತ ಮತ್ತು ನೇಪಾಳದ ನಡುವಿನ ಸಮಸ್ಯೆಗೆ ಮಾತುಕತೆ ಮೂಲಕ ಪರಿಹಾರ: ಒಲಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕಠ್ಮಂಡು: ನೇಪಾಳ ಮತ್ತು ಭಾರತದ ನಡುವಿನ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಬಗೆಹರಿಸಲಾಗುವುದು ಎಂದು ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಅವರು ಹೇಳಿದರು.

ಮೂರು ದಿನಗಳ ನೇಪಾಳ ಪ್ರವಾಸದಲ್ಲಿರುವ ಸೇನಾ ಮುಖ್ಯಸ್ಥ ಜನರಲ್‍ ಎಂ.ಎಂ.ನರವಣೆ ಅವರು ಶುಕ್ರವಾರ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಸಭೆ ನಡೆಸಿದರು. ಈ ವೇಳೆ ಉಭಯ ರಾಷ್ಟ್ರಗಳ ನಡುವಿನ ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಮಾತುಕತೆ ನಡೆಸಲಾಗಿದೆ.

ಸಭೆಯ ಬಳಿಕ ಟ್ವೀಟ್‌ ಮಾಡಿದ ಅವರು,‘ ಭಾರತ ಮತ್ತು ನೇಪಾಳದ ನಡುವಿನ ಸಮಸ್ಯೆ ಮಾತುಕತೆಯ ಮೂಲಕ ಬಗೆಹರಿಯಲಿದೆ ಎಂದು ಹೇಳಿದ್ದಾರೆ.

ನರವಣೆ ಅವರು ನೇಪಾಳಿ ಸೇನೆಯ ಪ್ರಧಾನಿ ಕಚೇರಿಗೂ ಭೇಟಿ ನೀಡಿದರು. ಈ ವೇಳೆ ನೇಪಾಳ ಸೇನಾ ಮುಖ್ಯಸ್ಥ ಜನರಲ್‌ ಪೂರ್ಣಾ ಚಂದ್ರ ಥಾಪಾ ಅವರು ಏರ್ಪಡಿಸಿದ್ದ ಔತಣಕೂಟದಲ್ಲೂ ಭಾಗವಹಿಸಿದ್ದರು. ಗುರುವಾರ ಉಭಯ ರಾಷ್ಟ್ರಗಳ ಸೇನಾ ಮುಖ್ಯಸ್ಥರು ದ್ವಿಪಕ್ಷೀಯ ಸೇನಾ ಸಹಕಾರವನ್ನು ವೃದ್ಧಿಸುವ ಬಗ್ಗೆ ಮಾತುಕತೆ ನಡೆಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು