ಬಾಬರಿ ಮಸೀದಿ ಧ್ವಂಸ ಪ್ರಕರಣ ವಿಚಾರಣೆ ಪೂರ್ಣ: ತಿಂಗಳಾಂತ್ಯಕ್ಕೆ ತೀರ್ಪು ಸಾಧ್ಯತೆ

ಲಖನೌ: ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು, ಬುಧವಾರದಿಂದ ತೀರ್ಪು ಬರೆಯಲು ಆರಂಭಿಸಲಿದ್ದಾರೆ. ತಿಂಗಳಾಂತ್ಯಕ್ಕೆ ಪ್ರಕರಣದ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 32 ಆರೋಪಿಗಳ ಪರ ವಕೀಲರು ತಮ್ಮ ವಾದ ಮಂಡಿಸಿದ್ದು, ವಿಚಾರಣೆ ಪ್ರಕ್ರಿಯೆಯು ಮಂಗಳವಾರ ಪೂರ್ಣಗೊಂಡಿತು. ಬುಧವಾರದಿಂದ ತೀರ್ಪು ಬರೆಸುವಿಕೆ ಆರಂಭಿಸುವುದಾಗಿ ನ್ಯಾಯಾಧೀಶರಾದ ಎಸ್.ಕೆ.ಯಾದವ್ ತಿಳಿಸಿದರು. ಪ್ರಕರಣದಲ್ಲಿ ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಬಿಜೆಪಿ ನಾಯಕರಾದ ಮುರಳಿ ಮನೋಹರ್ ಜೋಶಿ, ಉಮಾ ಭಾರತಿ ಸೇರಿದಂತೆ ಹಲವರು ಆರೋಪಿಗಳಾಗಿದ್ದಾರೆ.
ತನಿಖಾ ಸಂಸ್ಥೆಯಾದ ಸಿಬಿಐ ಆರೋಪಿಗಳ ವಿರುದ್ಧ 350 ಸಾಕ್ಷಿಗಳನ್ನು ಹಾಗೂ 600 ದಾಖಲೆಗಳನ್ನು ನ್ಯಾಯಾಲಯದ ಮುಂದೆ ಸಲ್ಲಿಸಿದೆ. ಸುಪ್ರೀಂ ಕೋರ್ಟ್ ವಿಧಿಸಿರುವ ಗಡುವನ್ನು ಗಮನದಲ್ಲಿರಿಸಿಕೊಂಡು, ತಿಂಗಳಾಂತ್ಯದ ಒಳಗೇ ಪ್ರಕರಣದ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.