ಮಂಗಳವಾರ, ಅಕ್ಟೋಬರ್ 20, 2020
23 °C

ಸಾಮೂಹಿಕ ಅತ್ಯಾಚಾರ: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಹತ್ರಾಸ್: ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಹತ್ರಾಸ್ ಜಿಲ್ಲೆಯಾದ್ಯಂತ ಅಕ್ಟೋಬರ್ 31ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿರುವುದಾಗಿ ಜಿಲ್ಲಾಧಿಕಾರಿ ಪಿ.ಕೆ.ಲಕ್ಷಕಾರ್‌ ಗುರುವಾರ ತಿಳಿಸಿದ್ದಾರೆ.

ಇದೇ ವೇಳೆ ಜಿಲ್ಲೆಯ ಗಡಿಭಾಗಗಳನ್ನು ಬಂದ್ ಮಾಡುವಂತೆ ಜಿಲ್ಲಾಡಳಿತ ಸೂಚಿಸಿದೆ.

ಹತ್ರಾಸ್‌ ಜಿಲ್ಲೆಯ 19 ವರ್ಷದ ದಲಿತ ಮಹಿಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ದೆಹಲಿ ಆಸ್ಪತ್ರೆಯಲ್ಲಿ ಮಂಗಳವಾರ ಸಾವನ್ನಪ್ಪಿದ್ದು, ಬುಧವಾರ ಮುಂಜಾನೆ ಸಂತ್ರಸ್ಥೆಯ ಕುಟುಂಬದವರ ಅನುಪಸ್ಥಿತಿಯಲ್ಲಿ ಪೊಲೀಸರು ಆಕೆಯ ಶವಸಂಸ್ಕಾರ ಮಾಡಿದ್ದರು ಎಂದು ಆರೋಪಿಸಲಾಗಿತ್ತು.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು, ರಾಜಕೀಯ ನಾಯಕರು ಕುಟುಂಬದ ಸದಸ್ಯರನ್ನು ಭೇಟಿಯಾಗಲು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಅವರು ಸಂತ್ರಸ್ಥೆಯ ಕುಟುಂಬದವರನ್ನು ಭೇಟಿಯಾಗಲು ಅವರ ಹಳ್ಳಿಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಹತ್ರಾಸ್‌ಗೆ ಹೊರಟಿದ್ದ ರಾಹುಲ್‌‌ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು