ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶದಲ್ಲಿ ಹನುಮ ದೇವರ ಬಗ್ಗೆ ವಿವಾದ: ಕಲ್ಲುತೂರಾಟ– ನಿಷೇಧಾಜ್ಞೆ ಜಾರಿ

ದರ್ಗಾ ಸಮೀಪ ಹನುಮ ದೇವರ ವಿಗ್ರಹ ಪ್ರತಿಷ್ಠಾಪನೆ ವಿವಾದ
Last Updated 17 ಮೇ 2022, 13:00 IST
ಅಕ್ಷರ ಗಾತ್ರ

ನೀಮಚ್‌, ಮಧ್ಯಪ್ರದೇಶ: ಇಲ್ಲಿನ ದರ್ಗಾವೊಂದರ ಬಳಿ ಹನುಮ ದೇವರ ವಿಗ್ರಹ ಪ್ರತಿಷ್ಠಾಪನೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದರಿಂದ ಮಧ್ಯಪ್ರದೇಶದ ನೀಮಚ್ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಗ್ರಹ ಪ್ರತಿಷ್ಠಾಪನೆ ಬಗ್ಗೆ ಎರಡು ಗುಂಪುಗಳ ನಡುವೆ ಸೋಮವಾರ ರಾತ್ರಿ ಮಾತಿನ ಚಕಮಕಿ ನಡೆಯಿತು. ನಂತರ ಪರಸ್ಪರ ಕಲ್ಲು ತೂರಾಟ ನಡೆಯಿತು. ಜನರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದರು ಎಂದು ಅವರು ಹೇಳಿದ್ದಾರೆ.

ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ನೇಹಾ ಮೀನಾ ಅವರು ನೀಮಚ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

‘ಘಟನೆಗೆ ಸಂಬಂಧಿಸಿದ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದೆ. ಕಲ್ಲು ತೂರಾಟದ ಸಂದರ್ಭದಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರಿಗೆ ಗಾಯಗಳಾಗಿವೆ. ಸ್ತಳದಲ್ಲಿ ಬಿಗಿ ಬಂದೋಬಸ್ತ್‌ ಮಾಡಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಸೂರಜ್ ಕುಮಾರ್ ವರ್ಮಾ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT