ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾದಿಗೆ ಅವಹೇಳನ: ರಾಂಚಿ ಹಿಂಸಾಚಾರದಲ್ಲಿ ಪೊಲೀಸರ ಗುಂಡಿಗೆ ಇಬ್ಬರ ಬಲಿ

ಅಕ್ಷರ ಗಾತ್ರ

ರಾಂಚಿ: ಪ್ರವಾದಿ ಮಹಮ್ಮದರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಮುಖಂಡರಾದ ನೂಪುರ್‌ ಶರ್ಮಾ ಹಾಗೂ ನವೀನ್ ಜಿಂದಾಲ್ ಅವರನ್ನು ಬಂಧಿಸಬೇಕೆಂದು ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಡೆದ ಪ್ರತಿಭಟನೆಯು ಶುಕ್ರವಾರ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಪೊಲೀಸರ ಗುಂಡಿಗೆ ಇಬ್ಬರು ಪ್ರತಿಭಟನಾಕಾರರು ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆಗೆ ಇಳಿದಾಗ ಗುಂಡು ಹಾರಿಸಲಾಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆ ಅಧಿಕಾರಿಗಳು ದೃಢಪಡಿಸಿದ್ದಾರೆ.

ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಒಟ್ಟು 22 ಮಂದಿಯಲ್ಲಿ 10 ಪೊಲೀಸರೂ ಸೇರಿದ್ದಾರೆ. ಇದರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ ನಂತರ ಜಾರ್ಖಂಡ್‌ನ ಹಲವು ನಗರಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಕಲ್ಲು ತೂರಾಟ ನಡೆಸುತ್ತಿದ್ದ ಗುಂಪನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT