ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾದಿಗೆ ಅವಹೇಳನ ಖಂಡಿಸಿ ಹಿಂಸಾತ್ಮಕ ಪ್ರತಿಭಟನೆ: ದೇಶದಾದ್ಯಂತ 400 ಜನರ ಬಂಧನ

Last Updated 13 ಜೂನ್ 2022, 4:25 IST
ಅಕ್ಷರ ಗಾತ್ರ

ಲಖನೌ: ಪ್ರವಾದಿ ಮಹಮ್ಮದ್‌ ಅವರ ಅವಹೇಳನವನ್ನು ಖಂಡಿಸಿದೇಶದಾದ್ಯಂತ ಶುಕ್ರವಾರದ (ಜೂನ್‌ 10) ಪ್ರಾರ್ಥನೆ ಬಳಿಕ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದ ಆರೋಪದ ಮೇಲೆ 400ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

ಬಿಜೆಪಿ ವಕ್ತಾರೆಯಾಗಿದ್ದ ನೂಪುರ್‌ ಶರ್ಮಾ ಹಾಗೂ ದೆಹಲಿ ಬಿಜೆಪಿ ಘಟಕದಮಾಧ್ಯಮ ವಿಭಾಗದ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್ ಅವರು ಪ್ರವಾದಿಗೆ ಅವರಿಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆಗಳು ನಡೆದಿದ್ದವು.

ಉತ್ತರ ಪ್ರದೇಶ, ಜಾರ್ಖಂಡ್‌ ಸೇರಿದಂತೆ ಹಲವೆಡೆ ಪ್ರತಿಭಟನೆಗಳು ಹಿಂಸಾರೂಪಕ್ಕೆ ತಿರುಗಿದ್ದವು.ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ ಬೆಥುಯಾದಹರಿ ರೈಲು ನಿಲ್ದಾಣದಲ್ಲಿ ಪ್ರತಿಭಟನಾಕಾರರ ಗುಂಪು ರೈಲುವೊಂದಕ್ಕೆ ಭಾನುವಾರ ಸಂಜೆ ಹಾನಿ ಮಾಡಿತ್ತು.

ಸದ್ಯ ಉತ್ತರ ಪ್ರದೇಶದ ಎಂಟು ಜಿಲ್ಲೆಗಳಲ್ಲಿ ಒಟ್ಟು 304 ಮಂದಿ, ಪಶ್ಚಿಮ ಬಂಗಾಳದ ಹೌರಾ, ಮುರ್ಷಿದಾಬಾದ್‌ ಜಿಲ್ಲೆಯಲ್ಲಿ 100 ಜನರನ್ನು ಬಂಧಿಸಲಾಗಿದೆ. ರಾಂಚಿಯಲ್ಲಿ 25 ಎಫ್‌ಐಆರ್‌ಗಳು ದಾಖಲಾಗಿವೆ.

'ಉತ್ತರ ಪ್ರದೇಶದ 9 ಜಿಲ್ಲೆಗಳಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ 13 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಎಂಟು ಜಿಲ್ಲೆಗಳಲ್ಲಿ 304 ಜನರನ್ನು ಬಂಧಿಸಲಾಗಿದೆ.ಪ್ರಯಾಗ್‌ರಾಜ್‌ನಲ್ಲಿ 91 ಮಂದಿಯನ್ನು ಬಂಧಿಸಲಾಗಿದೆ. ಅದೇರೀತಿ, ಸಹರಾನ್‌ಪುರದಲ್ಲಿ 71, ಹತರಾಸ್‌ನಲ್ಲಿ 51,ಫಿರೋಜಾಬಾದ್‌ನಲ್ಲಿ 15, ಅಂಬೇಡ್ಕರ್‌ನಗರ ಮತ್ತು ಮೊರಾದಾಬಾದ್‌ನಲ್ಲಿ ತಲಾ 34 ಜನರನ್ನು ಬಂಧಿಸಲಾಗಿದೆ. ಅಲಿಗಢದಲ್ಲಿ ಆರು, ಜಲೌನ್‌ನಲ್ಲಿ ಇಬ್ಬರನ್ನು ಸೆರೆಹಿಡಿಯಲಾಗಿದೆ' ಎಂದುಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ಪ್ರತಿಭಟನೆಗಳ ನಂತರದ ಬೆಳವಣಿಗೆಗಳ ಹಿಂದೆ ಅಧಿಕಾರಿಗಳ ಕೈವಾಡವಿದೆ ಎಂದು ರಾಜಕೀಯ ಪಕ್ಷಗಳು ಆರೋಪಿಸಿವೆ. ಬಿಜೆಪಿ ನಾಯಕರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣವೇ ಪ್ರತಿಕ್ರಿಯಿಸಬೇಕಿತ್ತು ಎಂದು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಹೇಳಿದ್ದಾರೆ.

ಆದಾಗ್ಯೂ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್‌ ಅವರು, ಇದು ರಾಜ್ಯಗಳ ಕಾನೂನು ಮತ್ತು ಸುವ್ಯವಸ್ಥೆಯ ವಿಚಾರವಾಗಿದ್ದು, ಸರ್ಕಾರಗಳು ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ರಾಜಕೀಯ ನಾಯಕರು ಮತ್ತು ಸಂಘಟನೆಗಳು ಪ್ರತಿಭಟನೆಗಳಿಗೆ ಕುಮ್ಮಕ್ಕು ನೀಡಬಾರದು ಒತ್ತಿ ಹೇಳಿದ್ದಾರೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT