ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂಪುರ್ ಶರ್ಮಾ ತಲೆ ಕತ್ತರಿಸುವ ಅಣಕು ವಿಡಿಯೊ ಪ್ರಕಟಿಸಿದ್ದ ಯುಟ್ಯೂಬರ್‌ ಬಂಧನ

ಅಕ್ಷರ ಗಾತ್ರ

ನವದೆಹಲಿ: ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾರ ತಲೆಕತ್ತರಿಸುವ ಅಣಕುವಿಡಿಯೊವನ್ನು ಪೋಸ್ಟ್ ಮಾಡಿದ್ದಕ್ಕಾಗಿ ಕಾಶ್ಮೀರದ ಯುಟ್ಯೂಬರ್ ಅನ್ನು ಬಂಧಿಸಲಾಗಿದೆ.

ಕಾಶ್ಮೀರ ಮೂಲದ ಯುಟ್ಯೂಬರ್ ಫೈಸಲ್ ವಾನಿ ಪ್ರಕಟಿಸಿದ್ದ ವಿಡಿಯೊ ಸಾರ್ವಜನಿಕರಲ್ಲಿ ಭಯ ಮತ್ತು ಆತಂಕ ಸೃಷ್ಟಿಸಿದೆ ಎಂದು ಜಮ್ಮು–ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ.

‘ಯುಟ್ಯೂಬರ್ ಫೈಸಲ್ ವಾನಿಯನ್ನು ಬಂಧಿಸಲಾಗಿದೆ. ಭಯ ಸೃಷ್ಟಿಸುವ ವಿಡಿಯೊವನ್ನು ಆತ ಯುಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ್ದಾನೆ. ಇದು ಸಾರ್ವಜನಿಕರ ನೆಮ್ಮದಿಗೆ ಧಕ್ಕೆತಂದಿದೆ. ಸಾರ್ವಜನಿಕರಲ್ಲಿ ಭಯ ಮತ್ತು ಆತಂಕವನ್ನು ಉಂಟುಮಾಡಿದೆ’ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನೂಪುರ್ ಶರ್ಮಾ ಅವರ ತಲೆ ಕತ್ತರಿಸುವ ಅಣಕುವಿಡಿಯೊ ಹಾಕಿದ್ದ ಫೈಸಲ್ ವಾನಿ ಬಹಿರಂಗ ಕ್ಷಮೆ ಕೇಳಿದ್ದಾನೆ. ಈ ವಿಡಿಯೊವನ್ನು ಯುಟ್ಯೂಬ್‌ನಿಂದ ಡಿಲೀಟ್‌ ಮಾಡಿದ್ದಾನೆ.

ಕಳೆದ ಮೇ 27ರಂದು ಖಾಸಗಿ ಸುದ್ದಿ ವಾಹಿನಿಯಲ್ಲಿ ಜ್ಞಾನವಾಪಿ ಮಸೀದಿ ಕುರಿತಾದ ಚರ್ಚೆಯಲ್ಲಿ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರು ಪ್ರವಾದಿ ಮಹಮ್ಮದರ ಕುರಿತು ಅವಹೇಳನಾಕಾರಿ ಮಾತುಗಳನ್ನು ಆಡಿದ್ದಾರೆ ಎಂದು ಆರೋಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT