ನೂಪುರ್ ಶರ್ಮಾ ಹೇಳಿಕೆ ಪ್ರಕರಣ: ನಾವಿಕಾಗೆ ಮಧ್ಯಂತರ ರಕ್ಷಣೆ ನೀಡಿದ ‘ಸುಪ್ರೀಂ’

ನವದೆಹಲಿ: ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರು ಟಿ.ವಿಯ ಚರ್ಚೆಯೊಂದರಲ್ಲಿ ಪ್ರವಾದಿ ಮಹಮ್ಮದ್ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂದರ್ಭದಲ್ಲಿ ಸುದ್ದಿ ನಿರೂಪಣೆ ಮಾಡುತ್ತಿದ್ದ ನಾವಿಕಾ ಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ರಕ್ಷಣೆ ನೀಡಿ ಸೋಮವಾರ ಆದೇಶಿಸಿದೆ.
ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು, ನಾವಿಕಾ ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿ, ಕೇಂದ್ರ ಸರ್ಕಾರ, ಪಶ್ಚಿಮ ಬಂಗಾಳ ಸರ್ಕಾರ ಮತ್ತು ಇತರ ಅರ್ಜಿದಾರರಿಗೆ ನೋಟಿಸ್ ಜಾರಿಗೊಳಿಸಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.