ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನದಿ, ನೀರಿನ ಮೂಲಗಳ ಸಂರಕ್ಷಣೆ ಸರ್ಕಾರದ ಮೂಲಭೂತ ಕರ್ತವ್ಯ: ಕೇರಳ ಹೈಕೋರ್ಟ್‌

Last Updated 25 ಜುಲೈ 2021, 8:57 IST
ಅಕ್ಷರ ಗಾತ್ರ

ಕೊಚ್ಚಿ: ‘ನದಿಗಳು ಮತ್ತು ಇತರ ನೀರಿನ ಮೂಲಗಳ ಸಂರಕ್ಷಣೆಯು ರಾಜ್ಯ ಸರ್ಕಾರ ಮತ್ತು ಸ್ಥಳೀಯ ಸಂಸ್ಥೆಗಳ ಮೂಲಭೂತ ಕರ್ತವ್ಯ’ ಎಂದು ಕೇರಳ ಹೈಕೋರ್ಟ್‌ ಹೇಳಿದೆ.

ಮೀನಾಚಿಲ್ ನದಿಯ ಸಂರಕ್ಷಣೆಯ ಹೊಣೆಯನ್ನು ತನಗೆ ನೀಡುವಂತೆ ಸಂಘಟನೆಯೊಂದು ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಈ ಅರ್ಜಿಯನ್ನು ತಿರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಎಸ್.ಮಣಿಕುಮಾರ್‌ ಮತ್ತು ನ್ಯಾಯಮೂರ್ತಿ ಶಾಜಿ ಪಿ.ಚಾಳೆ ಅವರನ್ನು ಒಳಗೊಂಡ ಪೀಠವು, ನದಿಯ ನಿರ್ವಹಣೆಯ ಜೊತೆಗೆ ಅತಿಕ್ರಮಣವನ್ನು ತೆರವುಗೊಳಿಸುವಂತೆ ಸರ್ಕಾರ ಮತ್ತು ಕೊಟ್ಟಾಯಂನ ಮೂರು ಪುರಸಭೆಗಳಿಗೆ ನಿರ್ದೇಶಿಸಿದೆ.

ಪ್ರತಿ ಮೂರು ತಿಂಗಳಿಗೊಮ್ಮೆ ಮೀನಾಚಿಲ್ ನದಿಯ ನಿರ್ವಹಣೆ ಬಗ್ಗೆ ಪರಿಶೀಲಿಸಿ, ಅದರ ವರದಿಯನ್ನು ಕೊಟ್ಟಾಯಂನ ಜಿಲ್ಲಾಧಿಕಾರಿಗೆ ಸಲ್ಲಿಸುವಂತೆ ರಾಜ್ಯ ಸರ್ಕಾರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಪೀಠ ಸೂಚಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT