ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಮಸೂದೆಗೆ ವಿರೋಧ: ಪಂಜಾಬ್‌ನಲ್ಲಿ ರೈತ ಆತ್ಮಹತ್ಯೆ

Last Updated 19 ಸೆಪ್ಟೆಂಬರ್ 2020, 8:31 IST
ಅಕ್ಷರ ಗಾತ್ರ

ಚಂಡೀಗಡ: ‘ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮಸೂದೆಗಳನ್ನು ವಿರೋಧಿಸಿ ಪಂಜಾಬ್‌ನ ಮುಕ್ತಸರದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಇದರಲ್ಲಿ ಪಾಲ್ಗೊಂಡಿದ್ದ ರೈತ ಪ್ರೀತಮ್‌ ಸಿಂಗ್‌ (70) ವಿಷಕಾರಿ ವಸ್ತು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

‘ಮಾನ್ಸಾ ಜಿಲ್ಲೆಯ ಅಕ್ಕಾನವಾಲಿ ಗ್ರಾಮದ ನಿವಾಸಿಯಾಗಿರುವ ಪ್ರೀತಮ್‌, ಶುಕ್ರವಾರ ಬೆಳಿಗ್ಗೆ ವಿಷಕಾರಿ ವಸ್ತು ಸೇವಿಸಿದ್ದರು. ಅಸ್ವಸ್ಥಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಹೇಳಿದ್ದಾರೆ.

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಪ್ರಕಾಶ್‌ ಸಿಂಗ್ ಬಾದಲ್‌ ಅವರ ಸ್ವಗ್ರಾಮ ಬಾದಲ್‌ನಲ್ಲಿ ಭಾರತೀಯ ಕಿಸಾನ್‌ ಯೂನಿಯನ್‌ (ಬಿಕೆಯು) ಸೆಪ್ಟೆಂಬರ್‌ 15ರಿಂದ ಪ್ರತಿಭಟನೆ ನಡೆಸುತ್ತಿದೆ. ಇದರಲ್ಲಿ ಪ್ರೀತಂ ಅವರು ಭಾಗವಹಿಸಿದ್ದರು.

‘ಪ್ರೀತಂ ಅವರ ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೀತಂ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದುಭಾರತೀಯ ಕಿಸಾನ್‌ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಸುಖದೇವ್‌ ಸಿಂಗ್‌ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT