ಸೋಮವಾರ, ಮಾರ್ಚ್ 1, 2021
29 °C

ಕೃಷಿ ಕಾಯ್ದೆಗಳನ್ನು 18 ತಿಂಗಳು ಅಮಾನತಿನಲ್ಲಿಡುವ ಕೇಂದ್ರದ ಪ್ರಸ್ತಾವ ತಿರಸ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ದೆಹಲಿ: ಕೃಷಿಗೆ ಸಂಬಂಧಿಸಿದ ಮೂರು ವಿವಾದಾತ್ಮಕ ಕಾನೂನುಗಳನ್ನು 18 ತಿಂಗಳು ಅಮಾನತುಗೊಳಿಸುವ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಜಂಟಿ ಸಮಿತಿ ರಚಿಸುವ ಸರ್ಕಾರದ ಪ್ರಸ್ತಾವವನ್ನು ರೈತ ಸಂಘಟನೆಗಳು ಗುರುವಾರ ತಿರಸ್ಕರಿಸಿವೆ.

ಕಾಯ್ದೆಗಳ ರದ್ಧತಿಗೆ ಆಗ್ರಹಿಸಿ ದೆಹಲಿಯ ಹೊರ ವಲಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳ ಮಾತೃ ಸಂಸ್ಥೆ 'ಸಂಯುಕ್ತ ಕಿಸಾನ್‌ ಮೋರ್ಚಾ' ಈ ನಿರ್ಧಾರವನ್ನು ಪ್ರಕಟಿಸಿದೆ.

ಬುಧವಾರ ಸರ್ಕಾರವು ರೈತ ಸಂಘಗಳ ಮುಂದಿಟ್ಟ ಪ್ರಸ್ತಾವವನ್ನು ತಿರಸ್ಕರಿಸುವ ನಿರ್ಧಾರವನ್ನು ಸಂಯುಕ್ತ ಕಿಸಾನ್‌ ಮೋರ್ಚಾದ ಪ್ರಧಾನ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

'ಈ ಚಳವಳಿಯಲ್ಲಿ ಇದುವರೆಗೆ ಹುತಾತ್ಮರಾದ 143 ರೈತರಿಗೆ ಸಂಘಟನೆಯು ಗೌರವ ಸಲ್ಲಿಸುತ್ತದೆ. ಈ ಆಂದೋಲನದಲ್ಲಿ ನಮ್ಮ ಒಡನಾಡಿಗಳು ನಮ್ಮನ್ನು ಅಗಲಿದ್ದಾರೆ. ಅವರ ತ್ಯಾಗ ವ್ಯರ್ಥವಾಗುವುದಿಲ್ಲ. ಈ ಕೃಷಿ ಕಾನೂನುಗಳನ್ನು ರದ್ದಾಗದೇ ನಾವು ಹಿಂತಿರುಗುವುದಿಲ್ಲ, ' ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ಪೂರ್ಣವಾಗಿ ರದ್ದುಪಡಿಸುವುದು, ಎಂಎಸ್‌ಪಿಗೆ ಕಾನೂನು ರೂಪಿಸುವುದು ಚಳವಳಿಯ ಮುಖ್ಯ ಉದ್ದೇಶ ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು